ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದರು.

ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್ ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಕೇಳಿದಾಗ, “ಇದು ನಮ್ಮೆಲ್ಲರಿಗೂ ದೊಡ್ಡ ಅವಮಾನ. ಮಕ್ಕಳು ಜೀವನದಲ್ಲಿ ಏನಾದರೂ ಆಗಬೇಕು ಎಂಬ ಕನಸು ಕಟ್ಟಿಕೊಂಡು ಕಷ್ಟಪಟ್ಟು ಓದಿರುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅವರಿಗೆ ಬಹಳ ತೊಂದರೆಯಾಗುತ್ತದೆ. ಇಂತಹ ಪ್ರಕರಣಗಳು ನಂಬಿಕೆಯನ್ನೇ ಕಳೆಯುತ್ತವೆ.

ಈ ಹಿಂದೆ ಪಿಎಸ್ಐ ಹಗರಣ ಸೇರಿದಂತೆ ಅನೇಕ ಪ್ರಕರಣ ನೋಡಿದ್ದೇವೆ. ಇದಕ್ಕೆ ಬಿಜೆಪಿ ಸಂಸದರು ಉತ್ತರ ನೀಡಬೇಕು. ಅಶ್ವತ್ ನಾರಾಯಣ ಅವರ ಹೇಳಿಕೆ ನೋಡುತ್ತಿದ್ದೆ. ಉತ್ತರ ನೀಡದಿರುವುದೇ ಒಳ್ಳೆಯದು ಎಂದಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದರು.

ಇದು ಸರಿಯೇ ಇಲ್ಲವೇ ಎಂದು ಹೇಳಬೇಕಲ್ಲವೇ? ಬೇರೆ ಸಮಯದಲ್ಲಿ ಮಾತನಾಡುವ ಸಂಸದರು ಹಾಗೂ ಕೇಂದ್ರದ ಸಚಿವರು ಈ ವಿಚಾರದ ಬಗ್ಗೆ ಈಗ ಮಾತನಾಡಬೇಕು. ಇದು ಯಾರ ವೈಫಲ್ಯ? ಎಂದು ಹೇಳಬೇಕು. ಈ ಪ್ರಕರಣ ಕರ್ನಾಟಕದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ಬಿಲ್ಡಿಂಗ್ ಮೇಲೆ ಕೂತು ಕೂಗಾಡುತ್ತಿದ್ದರು” ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version