Updated By: Priyalachhi 

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯ ಭಾಗವಾಗಿ, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಬುಧವಾರ ಭಾರತೀಯ ಚುನಾವಣಾ ಆಯೋಗ(ECI) ನೋಟಿಸ್ ಜಾರಿ ಮಾಡಿದೆ.

ಅನಿವಾಸಿ ಭಾರತೀಯ(NRI) ಸೇನ್ ಅವರಿಗೆ ಜನವರಿ 16 ರಂದು ಅವರ ನಿವಾಸದಲ್ಲಿಯೇ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಬೂತ್ ಮಟ್ಟದ ಅಧಿಕಾರಿ(BLO) ಇಂದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದ ಬೋಲ್ಪುರದಲ್ಲಿರುವ ಸೇನ್ ಅವರ ‘ಪ್ರತಿಚಿ’ ನಿವಾಸದಲ್ಲಿ ಅವರ ಸಂಬಂಧಿಕರಿಗೆ ನೋಟಿಸ್ ತಲುಪಿಸಿದ್ದಾರೆ.

ಬಿಎಲ್ಒ ಸೋಂಬ್ರತ ಮುಖರ್ಜಿ ಅವರು, ಜನವರಿ 16 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಮರ್ತ್ಯ ಸೇನ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಚುನಾವಣಾ ಫಾರ್ಮ್‌ಗೆ ಸಂಬಂಧಿಸಿದ ‘ವ್ಯತ್ಯಾಸ’ಗಳನ್ನು’ ಪರಿಶೀಲಿಸಲಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version