Updated By: Priyalachhi

ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ನಡೆದ ಭಗವದ್ಗೀತಾ ಅಭಿಯಾನ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭಗವದ್ಗೀತೆಯನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.ತದ ನಂತರ ಮಾತನಾಡಿದ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ಕ್ರಮಗಳನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದರು.

ಶಾಲಾ ಮಕ್ಕಳಿಗೆ ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡಲು ರಾಮಾಯಣ ಮತ್ತು ಮಹಾಭಾರತವನ್ನು ಕಲಿಸಬೇಕು. “ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು ಭಗವದ್ಗೀತೆ ಈ ಪೀಳಿಗೆಗೆ ಮಾರ್ಗದರ್ಶನದ ಬೆಳಕಾಗಿದೆ. ಪ್ರತಿಯೊಬ್ಬರೂ ಭಗವದ್ಗೀತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version