Updated By: Priyalachhi 

ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣ ಗೌಡರು, Biggboss ನಿರೂಪಕ, ನಟ ಸುದೀಪ್ ನಿವಾಸಕ್ಕೆ ಭೇಟಿ ನೀಡಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಿಗ್‌ಬಾಸ್ ಸ್ಪರ್ಧಿಯಾಗಿರುವ ಅಶ್ವಿನಿ ಗೌಡ ಸಹ ಕನ್ನಡ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಇನ್ನು ಅಶ್ವಿನಿ ಗೌಡ ನಾರಾಯಣ ಗೌಡರ ಶಿಷ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಫಿನಾಲೆ ಹಂತದಲ್ಲಿರುವ ಸ್ಪರ್ಧಿಗಳಿಗೆ ಮೂರು ಆಸೆಗಳನ್ನು ಕೋರಿಕೊಳ್ಳಲು ಅವಕಾಶ ನೀಡಲಾಗಿತ್ತು. ಅದರಂತೆ ಅಶ್ವಿನಿಗೌಡ ಬಿಗ್‌ಬಾಸ್ ಮನೆಯಲ್ಲಿ ನಾರಾಯಣ ಗೌಡರನ್ನು ನೋಡಬೇಕು. ಅವರ ಅಶೀರ್ವಾದ ಪಡೆದುಕೊಳ್ಳಬೇಕು ಎಂದು ಹೇಳಿದ್ದರು.

ಇದೀಗ ಸುದೀಪ್ ಅವರನ್ನು ನಾರಾಯಣಗೌಡರು ಭೇಟಿಯಾಗಿದ್ದಾರೆ. ನಾರಾಯಣ ಗೌಡ್ರು ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಲು ಸುದೀಪ್ ನಿವಾಸಕ್ಕೆ ತೆರಳಿದ್ದು ಮಗನ ಮದುವೆಗೆ ಆಹ್ವಾನಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version