Updated By: Priyalachhi

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.

ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇವಸ್ಥಾನದಿಂದ ಮರಳಿ ಬರುವಾಗ ದುರ್ಘಟನೆ

ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅತಿವೇಗ ಅಥವಾ ಚಾಲಕನ ಅಜಾಗರೂಕತೆಯೇ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version