ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದೆ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version