Updated By: Priyalachhi

ಬೆಂಗಳೂರು: ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಕಾವೇರಿ ನಿವಾಸದಲ್ಲಿ ಇಂದು ಭೇಟಿಯಾದ ಗಿಲ್ಲಿನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ.

ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು.

ಈ ಕುರಿತ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version