BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಬಿ ಜಿ ರಾಮ್ ಜಿ ಯೋಜನೆ ವಿಚಾರದಲ್ಲಿ ವಿಶೇಷ ಅಧಿವೇಶನ ಅನಗತ್ಯ: ಆರ್. ಅಶೋಕ್

Author Picture
Published On: January 21, 2026

—Advertisement—

Updated By: Priyalachhi

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸುವ ಅಗತ್ಯವಿರಲಿಲ್ಲ. ನೇರವಾಗಿ ಸಚಿವರು ಅಥವಾ ಪ್ರಧಾನಿ ಅವರನ್ನು ಭೇಟಿ ಮಾಡಬಹುದಿತ್ತು. ಈ ನಿರ್ಣಯದಿಂದ ಮಾಧ್ಯಮಗಳಿಗೆ ಸಂದೇಶ ನೀಡಬಹುದೇ ಹೊರತು ಆಡಳಿತಾತ್ಮಕವಾಗಿ ಪ್ರಯೋಜನವಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಇದರಿಂದ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ ಎಂದರು.

ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ. ಇದು ಸಿಎಜಿ ವರದಿಯಲ್ಲೂ ಸಾಬೀತಾಗಿದೆ. ಹೊಸ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿರುವುದರ ಜೊತೆಗೆ, ಕೇಂದ್ರ ಶೇ.60ರಷ್ಟು ಹಾಗೂ ರಾಜ್ಯ ಶೇ. 40ರಷ್ಟು ಅನುದಾನ ನೀಡುವ ವ್ಯವಸ್ಥೆ ತಂದು ಅನುದಾನವನ್ನು ಹೆಚ್ಚಿಸಲಾಗಿದೆ, ಇದನ್ನು ಸರ್ಕಾರ ಮನಗಾಣಬೇಕು ಎಂದು ಅವರು ಒತ್ತಾಯಿಸಿದರು.

ವಿಬಿ ರಾಮ್ ಜೀ ಯೋಜನೆ ಕುರಿತು ತಿಳಿಯಲು ಹಾಗೂ ಅರಿವು ಮೂಡಿಸಲು ಎಲ್ಲ ಶಾಸಕರು, ಮುಖಂಡರ ಜೊತೆ ಸಭೆ ನಡೆಯಲಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆಯಲಾಗಿದೆ. ಯೋಜನೆ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಹಾಗೆಯೇ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರೂ ಬರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಯೋಜನೆಯ ಬಗ್ಗೆ ವಿವರಿಸಲಾಗುತ್ತದೆ. ಅಧಿವೇಶನಕ್ಕೂ ಮೊದಲು ಕಾರ್ಯಕ್ರಮ ನಡೆಸಿ ಯೋಜನೆ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಮಾಹಿತಿ ನೀಡಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp