Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬೆಂಗಳೂರಲ್ಲಿ ಹೆಚ್ಚಿದ ಅಪಘಾತಗಳು
Latest News

ಬೆಂಗಳೂರಲ್ಲಿ ಹೆಚ್ಚಿದ ಅಪಘಾತಗಳು

Sambrama Prabha NewsBy Sambrama Prabha NewsDecember 15, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಬೆಂಗಳೂರು ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ. ಲಕ್ಷಾಂತರ ವಾಹನಗಳು ಬೆಂಗಳೂರಲ್ಲಿ ರಸ್ತೆಗಿಳಿಯುತ್ತವೆ. ಹೀಗಾಗಿ ರಸ್ತೆ ಅಪಘಾತಗಳು ಬೆಂಗಳೂರಲ್ಲಿ ಹೆಚ್ಚಾಗುತ್ತಿವೆ. ಅದರಲ್ಲೂ ಪಾದಚಾರಿಗಳು ರಸ್ತೆ ಅವಘಡಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿದ್ದಾರೆ. ಬೆಂಗಳೂರಿನ ರಸ್ತೆ ಅಪಘಾತಗಳು ಎಷ್ಟು ಮಾರಣಾಂತಿಕ ಎಂಬ ಸಮಗ್ರ ವರದಿ ಇಲ್ಲಿದೆ.

ನಗರದಲ್ಲಿ ನಿತ್ಯ ಸರಾಸರಿ 2,300 ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಹಾಗಾಗಿ ನಗರದಲ್ಲಿ ವಾಹನಗಳ ಸಂಖ್ಯೆ 1.25 ಕೋಟಿಯ ಗಡಿ ದಾಟಿದೆ. ಈ ಪೈಕಿ ಶೇ.70ರಷ್ಟು ದ್ವಿಚಕ್ರ ವಾಹನಗಳಿವೆ. ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರತಿದಿನ ಸಾವಿರಾರು ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಲ್ಲಿ ಸುಮಾರು 26 ಲಕ್ಷಕ್ಕೂ ಅಧಿಕ ಕಾರುಗಳು ಓಡಾಡುತ್ತಿವೆ.

ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ನಡುವಿನ ಅನುಪಾತ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಹೀಗಾಗಿ ಸಂಚಾರ ಕಷ್ಟ ಸಾಧ್ಯವಾಗುತ್ತಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಪಘಾತಗಳಿಂದ ಮೃತಪಟ್ಟವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ ಪಾದಚಾರಿಗಳು ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ಅಪಘಾತ ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಂಡರೂ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಲೇ ಇವೆ. ಅತಿ ವೇಗದ ಸಂಚಾರದಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ.

4 ವರ್ಷದಲ್ಲಿ ನಡೆದ ಅಪಘಾತ, ಸಾವು ಏನಿದೆ?: ಬೆಂಗಳೂರಲ್ಲಿ 2025ರಲ್ಲಿ ಅಕ್ಟೋಬರ್ ತನಕ 3,985 ರಸ್ತೆ ಅವಘಡಗಳು ನಡೆದಿವೆ. ಈ ಪೈಕಿ 715 ಮಂದಿ ಸಾವಿಗೀಡಾಗಿದ್ದರೆ, 2,087 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೇ 2024 ರಲ್ಲಿ 4,769 ರಸ್ತೆ ಅಪಘಾತಗಳು ನಡೆದಿವೆ. ಈ ಪೈಕಿ 894 ಮಂದಿ ಸಾವಿಗೀಡಾಗಿದ್ದು, 2,841 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. 2023ರಲ್ಲಿ 4,974 ಅಪಘಾತಗಳಾಗಿ 910 ಮಂದಿ ಸಾವಿಗೀಡಾಗಿದ್ದರು. ಅದೇ 2022ರಲ್ಲಿ ಸಂಭವಿಸಿದ 3,822 ರಸ್ತೆ ಅಪಘಾತಗಳಲ್ಲಿ 772 ಜನರು ಮೃತಪಟ್ಟಿದ್ದರು ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಪಾದಚಾರಿಗಳದ್ದೇ ಸಾವು ಜಾಸ್ತಿ: ಬೆಂಗಳೂರಲ್ಲಿ ನಡೆಯುವ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನಲ್ಲಿ ಪಾದಚಾರಿಗಳ ಸಾವೇ ಹೆಚ್ಚಾಗಿದೆ. 2024ರಲ್ಲಿ ಸಂಭವಿಸಿದ ರಸ್ತೆ ಅಫಘಾತಗಳಲ್ಲಿ ಮೃತರಾದ ಒಟ್ಟು 894 ಮಂದಿ ಪೈಕಿ 246 ಮಂದಿ ಪಾದಚಾರಿಗಳಾಗಿದ್ದಾರೆ. ಅಂದರೆ ಒಟ್ಟು ಮೃತರ ಪೈಕಿ 27.50% ಪಾದಚಾರಿಗಳಾಗಿದ್ದಾರೆ. ಇನ್ಕು 2025ರಲ್ಲಿ ಅಕ್ಟೋಬರ್ ವರೆಗೆ ನಡೆದ ರಸ್ತೆ ಅವಘಡಗಳಲ್ಲಿ ಮೃತರಾದ 715 ಮಂದಿ ಪೈಕಿ 203 ಮಂದಿ ಪಾದಚಾರಿಗಳಾಗಿದ್ದಾರೆ.‌ ಅಂದರೆ ಒಟ್ಟು ಮೃತರ ಪೈಕಿ 28% ಪಾದಚಾರಿಗಳಾಗಿದ್ದಾರೆ ಎಂದು ಗೃಹ ಇಲಾಖೆ ಅಂಕಿ – ಅಂಶ ನೀಡಿದೆ.

ದಾಖಲಾಗಿರುವ ಪಾದಚಾರಿ ರಸ್ತೆ ಉಲ್ಲಂಘನೆ ಕೇಸ್ ಎಷ್ಟು?: ಪಾದಚಾರಿಗಳ ಸುಗಮ ಸಂಚಾರದ ದೃಷ್ಟಿಯಿಂದ ಪಾದಚಾರಿ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಾ ಪಾದಚಾರಿ ರಸ್ತೆಯನ್ನು ಅತಿಕ್ರಮಣ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಿದೆ. ಜೊತೆಗೆ ಪಾದಚಾರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಮಾಡುತ್ತಾ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಬೆಂಗಳೂರಿನ ಪಾದಚಾರಿಗಳಿಗೆ ಮಾರ್ಗಗಳಲ್ಲಿ ವಾಹನ ನಿಲುಗಡೆ ಹಾಗೂ ವಾಹಾನ ಓಡಾಟ ಮಾಡುವವ ವಿರುದ್ಧ ಮಾಡುತ್ತಿರುವವರ ವಿರುದ್ಧ ಬಿ.ಎನ್‌.ಎಸ್. ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆಯಡಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಬೆಂಗಳೂರು
Add as Preferred on Google Follow on Google News
Share. WhatsApp Facebook Twitter Telegram
Previous Articleಪೆರೋಲ್​ ಸಂಬಂಧ ಪೊಲೀಸರು ಸೂಕ್ತ ಆದೇಶ ಹೊರಡಿಸಿದರೆ ನ್ಯಾಯಾಲಯದ ಮೆಟ್ಟಿಲೇರುವ ಸಂಖ್ಯೆ ಕಡಿಮೆಯಾಗಬಹುದು: ಹೈಕೋರ್ಟ್​
Next Article ಬೆಳಗಾವಿ ಅಧಿವೇಶನವನ್ನು ಒಂದು ವಾರ ವಿಸ್ತರಿಸಿ: ಸ್ಪೀಕರ್​ಗೆ ಪತ್ರ ಬರೆದ ಅಶೋಕ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.