ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version