BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ

Author Picture
Published On: January 30, 2026

—Advertisement—

Updated By: Priyalachhi

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ, ವಾಸ್ತವ ಸ್ಥಿತಿಯನ್ನು ತೋರಿಸುವ ಕೆಲಸ ಮಾಡಬೇಕು. ಕನ್ನಡದ ಮಟ್ಟಿಗೆ ಡಾ.ರಾಜಕುಮಾರ್ ಸಿನಿಮಾಗಳಲ್ಲಿ ಇವೆಲ್ಲವನ್ನೂ ನೋಡುವುದಕ್ಕೆ ಸಾಧ್ಯವಿತ್ತು. ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

cinema-should-show-the-reality-of-society-cm-siddaramaiah

ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಗುರುವಾರ ಹಮ್ಮಿಕೊಳ್ಳಲಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿತ್ರೋತ್ಸವಗಳಿಂದ ಬೇರೆ ದೇಶಗಳ ಜನರ ಜೀವನ, ರಾಜಕೀಯ ಮತ್ತು ಸಮಾಜದ ಬಗ್ಗೆ ಅರ್ಥವಾಗುತ್ತದೆ. ಅಸಮಾನತೆ, ಸಮಾನತೆ ಅರ್ಥ ಮಾಡಿಕೊಳ್ಳುವುದು ಅವಶ್ಯಕ. ಅದಕ್ಕೆ ಚಿತ್ರೋತ್ಸವ ಸುವರ್ಣಾವಕಾಶ ಒದಗಿಸುತ್ತದೆ. ಅದನ್ನು ಉಪಯುಕ್ತವಾಗಿ ಬಳಸಿಕೊಂಡು, ಸಮಾಜದಲ್ಲಿ ಬದಲಾವಣೆ ತರಬೇಕು. ಅದು ಆಗದಿದ್ದರೆ, ಸಿನಿಮಾ ಬರೀ ಮನರಂಜನೆಗೆ ಸೀಮಿತವಾಗುತ್ತದೆ ಎಂದರು.

ನಾವು ಮನುಷ್ಯರು, ಮಾನವರಾಗಿ ಬಾಳುವುದು ಅವಶ್ಯಕ. ಪ್ರತಿ ವ್ಯಕ್ತಿಯನ್ನು ಪ್ರೀತಿ, ಸ್ನೇಹದಿಂದ ಕಾಣಬೇಕು. ಆಗ ಮಾತ್ರ ಸಮಸಮಾಜ ಕಟ್ಟುವುದಕ್ಕೆ ಸಾಧ್ಯ. ಬೇಧ, ಭಾವ, ಅಸಮಾನತೆ ಹೋಗಲಾಡಿಸುವ ಕೆಲಸವನ್ನು ಸಿನಿಮಾದ ಮೂಲಕ ಮಾಡಬೇಕು. ನಮ್ಮ ಸರ್ಕಾರ ಚಲನಚಿತ್ರ ಅಭಿವೃದ್ಧಿಗೆ ಸಹಕಾರ, ಬೆಂಬಲ ಕೊಡುತ್ತದೆ. ಬದುಕನ್ನು ಹಸನು ಮಾಡುವ ಕೆಲಸವನ್ನು ಚಲನಚಿತ್ರಗಳು ಮಾಡಲಿ ಎಂದು ಚಿತ್ರೋತ್ಸವಕ್ಕೆ ಶುಭ ಹಾರೈಸಿದರು.

ಫೆಬ್ರವರಿ 6ರ ವರೆಗೆ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಸುಮಾರು 70 ದೇಶಗಳ ಆಯ್ದ ಸುಮಾರು 240 ಸಿನಿಮಾ ಪ್ರದರ್ಶನ ನಡೆಯಲಿದೆ. ದೇಶ-ವಿದೇಶಗಳ ಅಪರೂಪದ ಈ ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶವಿದೆ. ಜಗತ್ತಿನ ಪ್ರಸಿದ್ಧ ಜನಮನ್ನಣೆಗಳಿಸುರುವ 100ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಹಾಗೂ 30ಕ್ಕೂ ಹೆಚ್ಚು ವಿವಿಧ ಭಾರತೀಯ ಭಾಷೆಗಳ ಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

cinema-should-show-the-reality-of-society-cm-siddaramaiah

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp