Updated By: Priyalachhi

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಹಲವಾರು ಶಾಪಿಂಗ್ ಮಾಲ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಅನ್ನು ನಗರ ಪೊಲೀಸ್ ಆಯುಕ್ತರ ಅಧಿಕೃತ ಐಡಿಗೆ ಕಳುಹಿಸಲಾಗಿದೆ.

ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಬಾಂಬ್ ಬೆದರಿಕೆ ಇಮೇಲ್ ಅನ್ನು ಕಳುಹಿಸಿದವರನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನವೆಂಬರ್ 30 ರಂದು ಬೆಳಗ್ಗೆ 11.53ಕ್ಕೆ ಮೋಹಿತ್ ಕುಮಾರ್ ಎಂಬ ವ್ಯಕ್ತಿಯೊಬ್ಬರು ಜಿಮೇಲ್ ಖಾತೆಯ ಮೂಲಕ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಪರಿಶೀಲನೆ ನಂತರ ಇಂದು ‘ಹುಸಿ ಬಾಂಬ್ ಬೆದರಿಕೆ’ ಎಂದು ಕಂಡುಬಂದಿದೆ

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version