Updated By: Priyalachhi

ಬೆಂಗಳೂರು: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹೈಕೋರ್ಟ್ ವಕೀಲರೊಬ್ಬರು ಸಾವಿಗೀಡಾಗಿದ್ದಾರೆ. ನಂತರ ಆ ಕಾರು ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಎನ್. ರಾಮಚಂದ್ರ ರೆಡ್ಡಿ (61) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಭರತ್ (19) ಮತ್ತು ಹಿಂಬದಿ ಕುಳಿತಿದ್ದ ಸ್ವಾತಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 17 ರಂದು ಸಂಜೆ 7.28ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂಜಯ್‌ನಗರ ಪ್ರದೇಶದ ಡಾಲರ್ಸ್ ಕಾಲೋನಿಯ ಆರ್‌ಎಂವಿ ಕ್ಲಬ್ ಬಳಿ ರೆಡ್ಡಿ ರಸ್ತೆ ದಾಟುತ್ತಿದ್ದಾಗ, ಅತಿವೇಗದಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ನಂತರ ಅದೇ ಕಾರು ಮುಂದಿನ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಲ್ಲಿಸಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಭಾಗಿಯಾದ ಎಲ್ಲ ವಾಹನಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಡ್ಡಿಯನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version