Updated By: Priyalachhi

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚಿನ ಹಣವನ್ನು ಮಂಜೂರು ಮಾಡಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗುರುವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಅಭಿನಂದಿಸಿದ್ದಾರೆ.

ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಬೀದರ್ ವರೆಗೆ ವಿಸ್ತರಿಸಬೇಕು ಎಂದು ದೇವೇಗೌಡರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, 2026ರ ಬಜೆಟ್‌ನಲ್ಲಿ ಸುಮಾರು 4,000 ಕಿ.ಮೀ. ವ್ಯಾಪ್ತಿಯ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ ಘೋಷಣೆಯನ್ನು ಶ್ಲಾಘಿಸಿದ್ದಾರೆ.

ಈ ರೈಲು ಕಾರಿಡಾರ್‌ಗಳು ಅಭಿವೃದ್ಧಿಯ ಕನೆಕ್ಟರ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತವೆ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ.

ಅವುಗಳಲ್ಲಿ, ಚೆನ್ನೈ-ಬೆಂಗಳೂರು-ಹೈದರಾಬಾದ್ ಕಾರಿಡಾರ್(ಹೈದರಾಬಾದ್-ಚೆನ್ನೈ ಮತ್ತು ಚೆನ್ನೈ-ಬೆಂಗಳೂರು) ದಕ್ಷಿಣ ಪ್ರದೇಶದಲ್ಲಿ ಅತಿ ವೇಗದ ತ್ರಿಕೋನವನ್ನು ಸೃಷ್ಟಿಸುತ್ತದೆ. ಈ ಕಾರಿಡಾರ್ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳು ಮತ್ತು ಚಲನಶೀಲತೆಯ ಅಗತ್ಯಗಳನ್ನು ನೇರವಾಗಿ ಪೂರೈಸುತ್ತದೆ ಮತ್ತು ಕೇರಳ ಹಾಗೂ ಪುದುಚೇರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version