Updated By: Priyalachhi

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ನಿನ್ನೆ ಕಾಂಗ್ರೆಸ್ ಏರ್ಪಡಿಸಿದ್ದ ಕೇಂದ್ರಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡು ನಂತರ ಸರ್ಕ್ಯೂಟ್ ಹೌಸ್‌ಗೆ ತೆರಳಿದರು.

ಮಧ್ಯಾಹ್ನದಿಂದ ಕೊಠಡಿ ಬಿಟ್ಟು ಹೊರ ಬರದಿದ್ದಾಗ ಗೊತ್ತಾಗಿದ್ದು ಅವರಿಗೆ ಅನಾರೋಗ್ಯ ಎಂಬ ವಿಚಾರ. ಮೊನ್ನೆ ಮಂಗಳವಾರ ರಾತ್ರಿ ಊಟ ಮಾಡಿದ ನಂತರ ಫುಡ್‌ಪಾಯಿಸನ್ ಆಗಿ ಹೊಟ್ಟೆ ನೋವು ಕೂಡ ಆರಂಭವಾಗಿತ್ತಂತೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಕೂಡ ಆಗಿರಲಿಲ್ಲ. ಬೆಳಗ್ಗೆಯಾದರೂ ಆರೋಗ್ಯ ಸರಿಯಾಗಿರಲಿಲ್ಲ. ಅದೇ ಸ್ಥಿತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಿಸಿಲಿನಲ್ಲಿ ಕುಳಿತರು. ಇದಾದ ಸ್ವಲ್ಪ ಹೊತ್ತಿಗೆ ಸುಸ್ತಾಗಿ ಸಿಎಂ ನೇರವಾಗಿ ಸರ್ಕ್ಯೂಟ್ ಹೌಸ್‌ಗೆ ತೆರಳಿದರು‌.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version