Updated By: Priyalachhi

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ ನಡೆದಿದೆ.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಕಂಟೋನೆಂಟ್ ಪ್ರದೇಶದ ತಮ್ಮ ಮಾಲೀಕತ್ವದ ಜಿ-ಸ್ಟ್ರಾರ್‌ಲೇಔಟ್‌ನಲ್ಲಿ ಜನಾರ್ದನ ರೆಡ್ಡಿ ಸುಮಾರು 73 ಕೋಟಿ ವೆಚ್ಚದಲ್ಲಿ ಮಾದರಿ ಮನೆ ನಿರ್ಮಿಸಿದ್ದರು. ಲೇಔಟ್‌ನಲ್ಲಿ ಮಾದರಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು.

ಶುಕ್ರವಾರ ಸಂಜೆ ದುಷ್ಕರ್ಮಿಗಳು ಸ್ಥಳಕ್ಕೆ ತೆರಳಿ, ರೆಡ್ಡಿಯ ಮಾಡೆಲ್ ಹೌಸ್‌ನ ಬಾಗಿಲು, ಕಿಟಕಿಗಳನ್ನು ಮುರಿದು ಹಾಕಿದ್ದು, ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ್ದಾರೆ. ಬಳಿಕ, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಹೊತ್ತಿಗೆ ಮನೆಯ ಕಿಟಕಿಗಳು, ಕಂಬಗಳು ಸೇರಿದಂತೆ ಕಟ್ಟಿಗೆಯಿಂದ ತಯಾರಿಸಿದ ವಸ್ತುಗಳು ಅಗ್ನಿಗಾಹುತಿಯಾಗಿವೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version