Updated By: Priyalachhi

ಜೋಹಾನ್ಸ್ ಬರ್ಗ್: ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಯ ನಡುವಿನ ಸಂಬಂಧ ಮುರಿಯಲು ಜಿ20 ವಿಶೇಷ ಉಪ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಶನಿವಾರ ಕರೆ ನೀಡಿದರು. ‘ಫೆಂಟನಿಲ್ ನಂತಹ ಅಪಾಯಕಾರಿ ಸಂಶ್ಲೇಷಿತ ಔಷಧಗಳ ಹರಡುವಿಕೆ, ಕಳ್ಳಸಾಗಣೆಯನ್ನು ತಡೆಗಟ್ಟಬೇಕಾಗಿದೆ ಮತ್ತು ಭಯೋತ್ಪಾದನೆ ಪ್ರೋತ್ಸಾಹಿಸುವ ಆರ್ಥಿಕ ಅಪರಾಧಕ್ಕೆ ಮಟ್ಟ ಹಾಕಬೇಕಾಗಿದೆ ಎಂದು ಹೇಳಿದರು.

ಸಂಶ್ಲೇಷಿತ ಔಷಧಿಗಳು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಫೆಂಟನಿಲ್‌ನಂತಹ ವಸ್ತುಗಳು ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸ್ಥಿರತೆ ಮತ್ತು ಪ್ರಪಂಚದಾದ್ಯಂತ ಭದ್ರತಾ ವ್ಯವಸ್ಥೆಗಳಿಗೆ ತೀವ್ರ ಅಪಾಯಗಳನ್ನುಂಟುಮಾಡುತ್ತವೆ ಎಂದು ಎಚ್ಚರಿಸಿದರು.

ಮಾದಕವಸ್ತು ಕಳ್ಳಸಾಗಣೆ ಜಾಲಗಳನ್ನು ಅಡ್ಡಿಪಡಿಸಲು, ಅಕ್ರಮವಾಗಿ ಹಣದ ಹರಿವನ್ನು ನಿಲ್ಲಿಸಲು ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದನ್ನು ತಡೆಯಲು ಎಲ್ಲಾ ದೇಶಗಳು ಒಟ್ಟಾಗಿ ಆರ್ಥಿಕ ಮತ್ತು ಭದ್ರತಾ ಕ್ರಮಗಳನ್ನು ಬಳಸಬೇಕು’ ಎಂದು ಮೋದಿ ಹೇಳಿದರು.

ಜಾಗತಿಕ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಲ್ಕು ಹೊಸ ಉಪಕ್ರಮಗಳನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಇದರಲ್ಲಿ ಮಾದಕವಸ್ತು-ಭಯೋತ್ಪಾದನಾ ಸಂಬಂಧವನ್ನು ಎದುರಿಸುವ ಉಪಕ್ರಮವೂ ಸೇರಿದೆ ಎಂದು ವರದಿಯಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version