Updated By: Priyalachhi

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ಬಹಿರಂಗಪಡಿಸಿವೆ ಅವರಿಗೆ 67 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಶ್ರೀನಿವಾಸನ್ ಅವರ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಘಟನೆ ವೇಳೆ ಪತ್ನಿ ಉಷಾ ಮನೆಯಲ್ಲಿ ಇರಲಿಲ್ಲ. ಪ್ರಸ್ತುತ ನಡೆಯುತ್ತಿರುವ ಸಂಸತ್ ಅಧಿವೇಶನದಿಂದಾಗಿ ಅವರು ದೆಹಲಿಗೆ ತೆರಳಿದ್ದರು. ಸದ್ಯ ವಿಷಯ ತಿಳಿದ ಕೂಡಲೇ ಉಷಾ ಮನೆಗೆ ಮರಳಿದ್ದಾರೆ. ಅಂತ್ಯಕ್ರಿಯೆಯ ಸಮಯ ನಿಗದಿಯಾಗಿಲ್ಲ. ಶ್ರೀನಿವಾಸನ್ ಪೊನ್ನಾನಿಯ ಕುಟ್ಟಿಕ್ಕಾಡ್‌ನ ವೆಂಗಲಿ ತರವಟ್ಟಿಯ ನಾರಾಯಣ ಮತ್ತು ಸರೋಜಿನಿ ದಂಪತಿಯ ಪುತ್ರರಾಗಿದ್ದರು. ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ನಿವೃತ್ತ ಡಿವೈಎಸ್ಪಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1991ರಲ್ಲಿ ತಮ್ಮ ದೂರದ ಸಂಬಂಧಿಯಾದ ಪಿಟಿ ಉಷಾ ಅವರನ್ನು ವಿವಾಹವಾದರು. ದಂಪತಿಗೆ ಡಾ. ಉಜ್ವಲ್ ವಿಘ್ನೇಶ್ ಎಂಬ ಮಗನಿದ್ದಾನೆ.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version