ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗಳಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಾಸ್ಟೇಲ್ ವಿದ್ಯಾರ್ಥಿಗಳೇ ಅವರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ.

ಇತ್ತೀಚಿಗೆ ವಚನಾನಂದ ಶ್ರೀಗಳನ್ನು ‘ಮಸಾಜ್ ಪ್ರಿಯ ಸ್ವಾಮೀಜಿ’ ಎಂದ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಹಾಸ್ಟೇಲ್‌ನ ಮೂವರು ಮಕ್ಕಳು ಶ್ರೀಗಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ.

ವಚನಾನಂದ ಸ್ವಾಮೀಜಿ ತಮಗೆ ಹಿಂಸೆ ನೀಡಿದ್ದಾರೆ ಎಂದು ಮಕ್ಕಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಸಿಬ್ಬಂದಿ ಹಾಗೂ ಪೊಲೀಸರು ಮಠಕ್ಕೆ ಭೇಟಿ ನೀಡಿದ್ದಾರೆ. ಮಠದ ಆಪ್ತರು ಸೇರಿದಂತೆ ಇತರರನ್ನು ವಿಚಾರಣೆ ಮಾಡುತ್ತಿದ್ದಾರೆ.

ನಾವು 8 ವರ್ಷದ ಹಿಂದೆ ವಚನಾನಂದ ಶ್ರೀ ಪೀಠಾಧಿಪತಿಯನ್ನಾಗಿ ಮಾಡಿದ್ದೆವು. ಆದರೆ ಇತ್ತೀಚೆಗೆ ಅವರ ನಡವಳಿಕೆಯಲ್ಲಿ ಸಾಕಷ್ಟು ಬದಲಾವಣೆ ಆಗಿತ್ತು, ಅವುಗಳನ್ನ ಹಿರಿಯರ ಸಮ್ಮುಖದಲ್ಲಿ ತಿದ್ದೋಕೆ ನೋಡಿದ್ವಿ, ಆದರೆ ಅದು ಆಗದೆ ಇದ್ದಾಗ ಅವರನ್ನು ಪೀಠದಿಂದ ಉಚ್ಚಾಟನೆ ಮಾಡಿದ್ವಿ ಎಂದು ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಹೇಳಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version