Updated By: Priyalachhi

ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು.

ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯತೀಂದ್ರರ ಈ‌ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಅವರೇ ನಮ್ಮ ಹೈಕಮಾಂಡ್ ಅಂತ ಒಪ್ಪಿಕೊಳ್ಳೋಣ. ಯತೀಂದ್ರ ಅಥವಾ ಶಿವಗಂಗಾ ಹೇಳಿಕೆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version