Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮತ್ತೊಂದು ಡಿಕೆಶಿ ಆಪ್ತ ಬಣ ದೆಹಲಿ ಯಾತ್ರೆ
Politics Nation News

ಮತ್ತೊಂದು ಡಿಕೆಶಿ ಆಪ್ತ ಬಣ ದೆಹಲಿ ಯಾತ್ರೆ

Sambrama Prabha NewsBy Sambrama Prabha NewsNovember 24, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ಇದೀಗ ಮತ್ತೊಂದು ಸ್ವರೂಪಕ್ಕೆ ತಿರುಗಿದೆ. ದಿನಗಳೆದಂತೆ ಅಧಿಕಾರ ಹಂಚಿಕೆಯ ಚರ್ಚೆ ತೀವ್ರಗೊಳ್ಳುತ್ತಿದೆ. ದೆಹಲಿ ಪರೇಡ್ ಮುಂದುವರಿದಿದೆ. ಇದರ ಮಧ್ಯೆ, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಶಾಸಕರಿಂದ ಸಹಿ ಸಂಗ್ರಹದ ಸದ್ದು ಜೋರಾಗಿ ಕೇಳಿ ಬರುತ್ತಿದೆ.

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಧಿಕಾರ ಹಂಚಿಕೆಯ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.‌ ಬಣ ರಾಜಕೀಯ ಇನ್ನಷ್ಟು ತೀವ್ರ ಸ್ವರೂಪ ಪಡೆಯುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಆದರೆ, ಅಧಿಕಾರ ಹಸ್ತಾಂತರದ ಗೊಂದಲ ಬಗೆಹರಿದಿಲ್ಲ. ಹೈಕಮಾಂಡ್ ಇದುವರೆಗೆ ಗೊಂದಲ ನಿವಾರಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ಹೈಕಮಾಂಡ್ ತೀರ್ಮಾನ ವಿಳಂಬವಾಗುತ್ತಿರುವ ಬೆನ್ನಲ್ಲೇ ಬಣ ರಾಜಕೀಯದ ಬೆಳವಣಿಗೆ ಉಲ್ಬಣಿಸುತ್ತಿದೆ.‌

ಡಿಕೆಶಿ ಆಪ್ತ ಶಾಸಕರ ಮತ್ತೊಂದು ಗುಂಪು ದೆಹಲಿ ಪರೇಡ್: ಈಗಾಗಲೇ ನಾಲ್ಕೈದು ಮಂದಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಶಾಸಕರು ದೆಹಲಿ ಪರೇಡ್ ನಡೆಸಿ, ವಾಪಸಾಗಿದ್ದರು. ಇದೀಗ ಡಿಕೆಶಿ ಆಪ್ತರ ಮತ್ತೊಂದು ಶಾಸಕರ ಬಣ ದೆಹಲಿ ಯಾತ್ರೆ ನಡೆಸಿದೆ. ಇದು ಪವರ್ ಶೇರಿಂಗ್ ಪೊಲಿಟಿಕ್ಸ್‌ನ ತೀವ್ರತೆಯನ್ನು ಮತ್ತಷ್ಟು ಹೆಚ್ಚಾಗಿಸಿದೆ. ಕಾಂಗ್ರೆಸ್ ಪಾಳಯದಲ್ಲಿನ ಪವರ್ ಫೈಟ್ ಪಾಲಿಟಿಕ್ಸ್ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪವರ್ ಫೈಟ್ ಬೆನ್ನಲ್ಲೇ ದೆಹಲಿಯಲ್ಲಿ ಶಕ್ತಿ ಪ್ರದರ್ಶನದ ತಂತ್ರಗಾರಿಕೆಯೂ ಹೆಚ್ಚಾಗುತ್ತಿದೆ.

ಇದೀಗ ಡಿ.ಕೆ.ಶಿವಕುಮಾರ್ ಆಪ್ತ ಶಾಸಕರ ಮತ್ತೊಂದು ಬಣ ದೆಹಲಿಗೆ ಯಾತ್ರೆ ನಡೆಸಿದೆ.‌ ದೆಹಲಿ ಖಾಸಗಿ ಹೊಟೇಲ್‌ನಲ್ಲಿ ಮೊಕ್ಕಾಂ ಹೂಡಿರುವ ಐದಾರು ಶಾಸಕರು ಹೈಕಮಾಂಡ್ ಅಂಗಳದಲ್ಲಿ ಶಕ್ತಿ ಪ್ರದರ್ಶನದ ನಡೆಗೆ ಮುಂದಾಗಿದೆ. ನಿನ್ನೆ ತಡರಾತ್ರಿ ದೆಹಲಿ ತಲುಪಿದ ಆರು ಶಾಸಕರ ತಂಡದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜ್, ಇಕ್ಬಾಲ್ ಹುಸೇನ್, ಶಾಸಕಿ ನಯನಾ ಮೋಟಮ್ಮ ಮತ್ತು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸೇರಿದ್ದಾರೆ. ಖಾಸಗಿ ಹೊಟೇಲ್ ನಲ್ಲಿ ಈ ಆಪ್ತ ಶಾಸಕರು ಒಟ್ಟಿಗೆ ಕೂತಿರುವ ಫೋಟೊ ಹರಿದಾಡುತ್ತಿದೆ.

ಡಿ.ಕೆ‌.ಶಿವಕುಮಾರ್ ಪರ ಶಾಸಕರ ಸಹಿ ಸಂಗ್ರಹ?: ಇತ್ತ ಡಿಕೆಶಿ ಪರ ಆಪ್ತ ಬಣ ಸಹಿ ಸಂಗ್ರಹದ ಮೊರೆ ಹೋಗಿದೆ ಎಂಬ ಚರ್ಚೆ ಜೋರಾಗಿ ಕೇಳಿ ಬರುತ್ತಿದೆ. ಪವರ್ ಫೈಟ್‌ನಲ್ಲಿ ಡಿ.ಕೆ.ಶಿವಕುಮಾರ್ ಪರ ಬೆಂಬಲ ಸೂಚಿಸಿ ಆಪ್ತರ ಬಣ ಸಹಿ ಸಂಗ್ರಹ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಆ ಮೂಲಕ ಅಂತಿಮ ತೀರ್ಮಾನ ವಿಳಂಬವಾಗುತ್ತಿರುವ ಹೈಕಮಾಂಡ್ ಮೇಲೆ ಪರೋಕ್ಷವಾಗಿ ಒತ್ತಡ ಹಾಕಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಆಪ್ತ ವಲಯ ತಿಳಿಸಿದೆ.

ಖಾಸಗಿ ಹೊಟೇಲ್‌ನಲ್ಲಿ ಡಿಕೆಶಿ ಆಪ್ತ ಶಾಸಕರು
ಶಾಸಕರ ಸಹಿ ಸಂಗ್ರಹದ ಮೂಲಕ ಸಂಖ್ಯಾಬಲ ಪ್ರದರ್ಶನಕ್ಕೆ ಡಿಕೆಶಿ ಬಣ ಮುಂದಾಗಿದೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.‌ ಇದುವರೆಗೂ ಸುಮಾರು 25ಕ್ಕೂ ಹೆಚ್ಚು ಶಾಸಕರ ಸಹಿ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಪರಪ್ಪನ ಅಗ್ರಹಾರಕ್ಕೆ ತೆರಳಿ ಡಿ.ಕೆ.ಶಿವಕುಮಾರ್ ಶಾಸಕ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಸಹಿ ಸಂಗ್ರಹಿಸಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಹಾವೇರಿ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯ ಶಾಸಕರ ಸಹಿ ಸಂಗ್ರಹಿಸಲು ಯತ್ನಿಸಲಾಗುತ್ತಿದೆ. ಆ ಮೂಲಕ ಡಿಕೆಶಿ ಪರ ಸುಮಾರು 60-70 ಬೆಂಬಲಿತ ಶಾಸಕರ ಸಹಿ ಸಂಗ್ರಹ ಮಾಡಲು ಯತ್ನಿಸಲಾಗುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ.‌

ಇದೇ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಜೈಲಿಗೆ ಹೋಗಿ ಅಲ್ಲಿದ್ದ ಇಬ್ಬರು ಶಾಸಕರಿಂದಲೂ ಡಿಕೆಶಿ ಬೆಂಬಲಕ್ಕೆ ಸಹಿ ಹಾಕಿಸಿಕೊಂಡು ಬಂದಿದ್ದಾರೆ. ಈಗ ಬಂದ ಮಾಹಿತಿ ಪ್ರಕಾರ ಸೀಕ್ರೆಟ್ ವೋಟಿಂಗ್‌ಗೆ ಡಿಕೆಶಿ ಒತ್ತಾಯ ಹಾಕ್ತಿದ್ದಾರಂತೆ. ಡಿಕೆಶಿ ಬಳಿ‌ ಈ ಮೊದಲು‌ 11- 12 ಶಾಸಕರು ಇದ್ರು, ಈಗ 70 ಇದ್ದಾರೆ ಅಂತೆಲ್ಲ ವರದಿಗಳು ಬರುತ್ತಿವೆ. ಇದು ಹೇಗೆ ಸಾಧ್ಯ? ಮ್ಯಾಜಿಕ್ ಆಯ್ತಾ?. ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೀತಿದೆ. ಪವರ್ ಶೇರ್ ಡೀಲ್‌ನಿಂದ ಸಿದ್ದರಾಮಯ್ಯ ಡಲ್ ಆಗಿದ್ದಾರೆ. ಕಳೆದೊಂದು ವಾರದಿಂದ ಸಿದ್ದರಾಮಯ್ಯ ಡಲ್ ಆಗಿದ್ದಾರೆ. ಶಾಸಕರ ಬೆಂಬಲ ಬೇಕು ಅಂತ ಹೇಳ್ತಿದ್ದ ಸಿದ್ದರಾಮಯ್ಯ ಈಗ ಹೈಕಮಾಂಡ್ ನಿರ್ಣಯ ಮುಖ್ಯ ಅಂತಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಿಕೆಶಿ ದೆಹಲಿ
Add as Preferred on Google Follow on Google News
Share. WhatsApp Facebook Twitter Telegram
Previous Articleಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
Next Article ‘ಮೂಲಭೂತ ಹಕ್ಕಿಗೆ ಧಕ್ಕೆ’: ಮುನ್ನೆಚ್ಚರಿಕಾ ಬಂಧನ ಆದೇಶ ರದ್ದುಪಡಿಸಿದ ಹೈಕೋರ್ಟ್​
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.