Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾದ ಸ್ಪರ್ಧಾರ್ಥಿಗಳು
Politics Latest News Nation News

ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾದ ಸ್ಪರ್ಧಾರ್ಥಿಗಳು

Sambrama Prabha NewsBy Sambrama Prabha NewsApril 11, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಾಕಷ್ಟು ಹೋರಾಟ ಮಾಡಿದರೂ ತಲೆ ಕೆಡಿಸಿಕೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಮತ್ತೆ ಹೋರಾಟದ ಹಾದಿ ತುಳಿಯಲು ಸಜ್ಜಾಗಿದ್ದಾರೆ. ಒಳ ಮೀಸಲಾತಿ ಗೊಂದಲದಿಂದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರಕ್ಕೆ ಸ್ಪರ್ಧಾರ್ಥಿಗಳ ಹೋರಾಟ ಹೊಸ ಸಂಕಷ್ಟ ತಂದೊಡ್ಡಿದೆ.

ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆಗೆ ಬೆದರಿದ ರಾಜ್ಯ ಸರ್ಕಾರ ದಿಢೀರ್‌ ಸಂಪುಟ ಸಭೆ ನಡೆಸಿ ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಭರವಸೆ ನೀಡಿತ್ತು. ಈಗ ಸರ್ಕಾರದ ಗಡುವು ಮುಗಿದರೂ ಅಧಿಸೂಚನೆ ಹೊರಬೀಳದ ಕಾರಣ ಸ್ಪರ್ಧಾರ್ಥಿಗಳು ಮತ್ತೆ ಹೋರಾಟದ ಹಾದಿ ತುಳಿದಿದ್ದಾರೆ.
ಏ.8 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಸಜ್ಜಾಗಿದ್ದ ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ಸ್ಪರ್ಧಾರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಶುಕ್ರವಾರ (ಏ.10) ಹೈಕೋರ್ಟ್ ಧಾರವಾಡ ಪೀಠವು ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿರುವುದು ಸರ್ಕಾರವನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ.

ನ್ಯಾಯಾಲಯದ ಷರತ್ತುಗಳೇನು?
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿರುವ ಹೈಕೋರ್ಟ್‌, ವಿದ್ಯಾರ್ಥಿ ಸಂಘಟನೆಗೆ ಹಲವು ಷರತ್ತುಗಳನ್ನು ವಿಧಿಸಿದೆ.
ಪ್ರತಿಭಟನೆಯಲ್ಲಿ ಕೇವಲ 100 ಜನರು ಮಾತ್ರ ಭಾಗವಹಿಸಬೇಕು. ಪಾಲ್ಗೊಳ್ಳುವವರ ಸಂಪೂರ್ಣ ಮಾಹಿತಿಯನ್ನು ಮೊದಲೇ ಪೊಲೀಸ್‌ ಇಲಾಖೆಗೆ ಒದಗಿಸಬೇಕು. ಅರ್ಜಿಯೊಂದಿಗೆ ಸಲ್ಲಿಸುವ ಪಟ್ಟಿಯಲ್ಲಿ ಹೆಸರು ಇರುವವರು ಮಾತ್ರ ಭಾಗವಹಿಸಬೇಕು. ಪಟ್ಟಿಯಲ್ಲಿ ಇಲ್ಲದವರು ಅಥವಾ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ವ್ಯಕ್ತಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬಾರದು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಥವಾ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಬೇಕು.

ಮುನ್ನೆಚ್ಚರಿಕೆ ಕ್ರಮವಾಗಿ ಅನುಮತಿ ನಿರಾಕರಣೆ
ಹೈಕೋರ್ಟ್ ಆದೇಶದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‌ ಅವರು, ʼಹಿಂದಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಕಳೆದ ಬಾರಿ ನಡೆದ ಹೋರಾಟದಲ್ಲಿ 17 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಈ ಸಂಬಂಧ 6 ಪ್ರಕರಣಗಳು ದಾಖಲಾಗಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ಸ್ಪರ್ಧಾರ್ಥಿಗಳ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲʼ ಎಂದು ಸ್ಪಷ್ಟಪಡಿಸಿದರು.

“ನ್ಯಾಯಾಲಯವು ನಮಗೆ ವಿವರಣೆ ನೀಡಲು ಎರಡು ದಿನಗಳ ಕಾಲಾವಕಾಶ ನೀಡಿತ್ತು. ನಾವು ವಾಸ್ತವಾಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ. ಅದರಂತೆ ಈಗ ಕೋರ್ಟ್ ಕೆಲವು ಷರತ್ತುಗಳೊಂದಿಗೆ ನೆಹರು ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ಕಲ್ಪಿಸಿದೆ,” ಎಂದು ತಿಳಿಸಿದರು.

ಸ್ಪರ್ಧಾರ್ಥಿಗಳ ಬೇಡಿಕೆಗಳೇನು?
ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಭರವಸೆ ನೀಡಿ ತಿಂಗಳು ಕಳೆದರೂ ನೇಮಕಾತಿ ಅಧಿಸೂಚನೆ ಆರಂಭಿಸದ ರಾಜ್ಯ ಸರ್ಕಾರದ ವಿರುದ್ಧ ಸ್ಪರ್ಧಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಧಾರವಾಡದಲ್ಲಿ ಕರೆ ನೀಡಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.

ಖಾಲಿ ಹುದ್ದೆಗಳ ಭರ್ತಿ, ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆಯ ಫಲಿತಾಂಶದ ಅಕ್ರಮ ಸೇರಿದಂತೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿರುವ ಎಲ್ಲಾ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು.

ಬಜೆಟ್ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದು ತಿಂಗಳೊಳಗಾಗಿ 56,432 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಭರವಸೆ ನೀಡಿದ್ದರು. ಆದರೆ, ತಿಂಗಳು ಕಳೆದರೂ ಯಾವುದೇ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿಲ್ಲ. ಸರ್ಕಾರ ಕೇವಲ ಸ್ಪರ್ಧಾರ್ಥಿಗಳಿಗೆ ಭರವಸೆಯನ್ನಷ್ಟೇ ನೀಡುತ್ತಿದೆ. ಕಾರ್ಯರೂಪಕ್ಕೆ ತರುತ್ತಿಲ್ಲ. ಆದ್ದರಿಂದ ಪ್ರತಿಭಟನೆ ಅನಿವಾರ್ಯ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಆರ್‌. ಕಾಂತಕುಮಾರ್‌ ತಿಳಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸ್ಪರ್ಧಾರ್ಥಿ
Add as Preferred on Google Follow on Google News
Share. WhatsApp Facebook Twitter Telegram
Previous Articleಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ
Next Article KEA Exam | ಪರೀಕ್ಷೆ ಮುಗಿದ ಒಂದೇ ಗಂಟೆಯಲ್ಲಿ ಓಎಂಆರ್ ಶೀಟ್ ಪ್ರಕಟ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.