Updated By: Priyalachhi 

ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ಅಮೀರ್ ಖಾನ್ ಗುರುವಾರ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಮತ ಚಲಾಯಿಸಿದ ಬಳಿಕ ಮತದಾನದ ಮಹತ್ವದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಟ್ಟೆಯಲ್ಲಿನ ವ್ಯವಸ್ಥೆಗಳನ್ನು ಶ್ಲಾಘಿಸಿದರು. ಮತದಾನ ಮತ್ತು BMC ವ್ಯವಸ್ಥೆ ಕುರಿತು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಅಮೂಲ್ಯವಾದ ಮತಗಳನ್ನು ಖಂಡಿತವಾಗಿ ಚಲಾಯಿಸುವಂತೆ ನಾನು ಹೇಳುತ್ತೇನೆ BMC ಇಲ್ಲಿ ಉತ್ತಮ ವ್ಯವಸ್ಥೆಗಳನ್ನು ಮಾಡಿದೆ ಎಂದರು.

ಅಮೀರ್ ಖಾನ್ ಮರಾಠಿಯಲ್ಲಿ ಮಾತನಾಡುತ್ತಿದ್ದಂತೆ, ಕೆಲವು ಮಾಧ್ಯಮದವರು ಹಿಂದಿಯಲ್ಲಿ ಸಂದೇಶವನ್ನು ಪುನರಾವರ್ತಿಸುವಂತೆ ಕೇಳಿದರು.

ಆಗ ನಗುತ್ತಾ ಹೇಳಿದ ಅಮೀರ್ ಖಾನ್ “Hindi mein? ಇದು ಮಹಾರಾಷ್ಟ್ರ ಎಂದರು. ಆಗ ಪತ್ರಕರ್ತರೊಬ್ಬರು ತಮ್ಮ ಸಂದೇಶ ದೆಹಲಿಯಲ್ಲೂ ಪ್ರಸಾರ ಆಗುತ್ತೆ ಎಂದಾಗ, “ಓಹ್, ಅದು ದೆಹಲಿಗೂ ಹೋಗುತ್ತದೆಯೇ? ಉತ್ತಮ ವ್ಯವಸ್ಥೆ ಮಾಡಲಾಗಿದೆ, ನಾನು ಎಲ್ಲರಿಗೂ ಮನವಿ ಮಾಡುತ್ತೇನೆ: ಬಂದು ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version