—Advertisement—

ಮನ್ರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿ ಕೆ ಶಿವಕುಮಾರ್

Author Picture
Published On: January 14, 2026

—Advertisement—

Updated By: Priyalachhi 

ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಶ್ರೀಮತಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು.

ಈ ಕೆಲಸಗಳನ್ನು ಸ್ಥಳೀಯ ಪಂಚಾಯಿತಿ ಸದಸ್ಯರು ತೀರ್ಮಾನ ಮಾಡುತ್ತಿದ್ದರು. ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಉದ್ಯೋಗ ನೀಡಬೇಕಿತ್ತು, ಉದ್ಯೋಗ ಸಿಗದಿದ್ದರೆ ಕೂಲಿ ನೀಡಲಾಗುತ್ತಿತ್ತು. ಇದರಲ್ಲಿ ದುರ್ಬಳಕೆ ತಡೆಗಟ್ಟಲು ಹೆಬ್ಬೆರಳಚ್ಚು ಸಂಗ್ರಹ ವಿಧಾನ ಅಳವಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಈ ಯೋಜನೆಯಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಯಾಗಿತ್ತು. ನಾವು ಬಳ್ಳಾರಿ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಕೆಲವು ಮಹಿಳೆಯರನ್ನು ವಿಚಾರಿಸಿದೆವು. ಕೆಲವು ಮಹಿಳೆಯರು ಬೇರೆಯವರ ಜಮೀನಿನಲ್ಲಿ ಹೋಗಿ ಕೆಲಸ ಮಾಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದರು. ಆಗ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದ ನಾನು ದೆಹಲಿಗೆ ಹೋಗಿ, ಈ ಪರಿಸ್ಥಿತಿಯನ್ನು ಸೋನಿಯಾ ಗಾಂಧಿ ಅವರಿಗೆ ತಿಳಿಸಿದೆ. ಅವರು ಸಿ.ಪಿ ಜೋಷಿ ಅವರನ್ನು ಕರೆಸಿ ಈ ವಿಚಾರದ ಬಗ್ಗೆ ಗಮನಹರಿಸಿ ಎಂದು ಸೂಚಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp