BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಮನ್ರೇಗಾ ಹೆಸರು-ಸ್ವರೂಪ ಬದಲಾಯಿಸಿದರೆ ಉಗ್ರ ಹೋರಾಟ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

Author Picture
Published On: December 17, 2025

—Advertisement—

Updated By: Priyalachhi

ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗದ ಹಕ್ಕನ್ನು ಖಾತರಿಗೊಳಿಸಿದ ಈ ಯೋಜನೆ ದೇಶ-ವಿದೇಶದ ಆರ್ಥಿಕ ತಜ್ಞರ ಶ್ಲಾಘನೆಯನ್ನು ಪಡೆದಿದೆ.

ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು, ಆದರೆ ನರೇಂದ್ರ ಮೋದಿ ಅವರ ಸರ್ಕಾರದಡಿ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು ಆಳವಾಗಿಸಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್’ಡಿ ಎಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಿರುವುದು ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ದಿನದಿಂದ ಅನುಸರಿಸಿಕೊಂಡು ಬರುತ್ತಿರುವ ಒಕ್ಕೂಟ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ. ಈ ನಡೆಯಿಂದ ಬಡವರು ಕೆಲಸ ಹುಡುಕಿಕೊಂಡು ವಲಸೆ ಹೋಗುವುದು ಹೆಚ್ಚಾಗಲಿದೆ. ಏಕೆಂದರೆ ಪ್ರಸ್ತಾಪಿತ ರೂಪದಲ್ಲಿ ಸ್ವಂತ ಸ್ಥಳದಲ್ಲಿ ಉದ್ಯೋಗ ಖಾತರಿಯಿಲ್ಲ, ಜೀವನ ನಿರ್ವಹಣೆಗಾಗಿ ಕುಟುಂಬಗಳು ದೂರದ ಪ್ರದೇಶಗಳಿಗೆ ಪ್ರಯಾಣ ಮಾಡಬೇಕಾಗಲಿದೆ ಎಂದು ತಿಳಿಸಿದ್ದಾರೆ.

ಗ್ರಾಮಸ್ವರಾಜ್ಯದ ಕನಸನ್ನು ಬಿತ್ತಿಹೋಗಿದ್ದ ಮಹಾತ್ಮ ಗಾಂಧೀಜಿಯವರ ಹೆಸರನ್ನು ಈ ಯೋಜನೆಗೆ ಇಟ್ಟಿರುವುದು ಅರ್ಥಪೂರ್ಣವಾದ ನಿರ್ಧಾರವಾಗಿತ್ತು. ವಿದೇಶದಲ್ಲಿ ಸುತ್ತಾಡುವಾಗ ಗಾಂಧಿ ಭಜನೆ ಮಾಡುವ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮಾತ್ರ ಗಾಂಧೀಜಿ ಹೆಸರನ್ನು ಅಳಿಸಿಹಾಕುವ ಹುನ್ನಾರಗಳನ್ನು ನಡೆಸುತ್ತಲೇ ಇದ್ದಾರೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಮೆರೆಸಲು ಹೊರಟಿರುವ ಪರಿವಾರದಿಂದ ಇದಕ್ಕಿಂತ ಬೇರೆಯಾದುದನ್ನು ಹೇಗೆ ನಿರೀಕ್ಷಿಸಲು ಸಾಧ್ಯ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp