Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮಹಾರಾಷ್ಟ್ರ ಪೊಲೀಸ್ ಮೈಸೂರಿನ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ದೀರಿ: ಸಿಎಂ
Politics

ಮಹಾರಾಷ್ಟ್ರ ಪೊಲೀಸ್ ಮೈಸೂರಿನ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ದೀರಿ: ಸಿಎಂ

Sambrama Prabha NewsBy Sambrama Prabha NewsJanuary 18, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಕಾನೂನು ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ.

ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ. ಕೊಲೆ, ಸುಲಿಗೆ, ಢಕಾಯಿತಿ, ದರೋಡೆ ಪ್ರಕರಣಗಳು ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಬೇಕು. ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ.

ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ: ಸಿಎಂ ಪ್ರಶ್ನೆ

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಿಎಂ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ. ಹೊಸ ಹೂಡಿಕೆ: ಸಚಿವ ಎಂ ಬಿ ಪಾಟೀಲ
Next Article 25 ಲಕ್ಷ ರೂ ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.