Updated By: Priyalachhi

ರಾಜ್ಯಾದ್ಯಂತ ಇಂದು ಸಿನಿಮಾ ಸಂಭ್ರಮ ಬಹಳ ಜೋರಾಗಿದೆ. ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟ ಅಭಿನಯ ಚಕ್ರವರ್ತಿ ಖ್ಯಾತಿಯ ಸುದೀಪ್​ ಮುಖ್ಯಭೂಮಿಕೆಯ 2025ರ ಬಹುನಿರೀಕ್ಷಿತ ಚಿತ್ರ ‘ಮಾರ್ಕ್​’ ಫೈನಲಿ ಚಿತ್ರಮಂದಿರ ಪ್ರವೇಶಿಸಿದೆ. ಕೋಟ್ಯಂತರ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮುಂಜಾನೆಯೇ ಥಿಯೇಟರ್​ ಬಳಿ ಸಂಭ್ರಮಾಚರಣೆ ಶುರುವಾಗಿತ್ತು.

ಕರ್ನಾಟಕದಲ್ಲಿ 180ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬೆಂಗಳೂರಿನ ಸಂತೋಷ್ ಸೇರಿ ಹಲವು ಥಿಯೇಟರ್​ಗಳಲ್ಲಿ ಬೆಳಗ್ಗೆ 6.30ಕ್ಕೆ ಶೋ ಆರಂಭಗೊಂಡಿದೆ. ಸುದೀಪ್ ಪುತ್ರಿ ಸಾನ್ವಿ ಹಾಗೂ ಪತ್ನಿ ಪ್ರಿಯಾ ಅವರು ಸಂತೋಷ್ ಚಿತ್ರಮಂದಿರದಲ್ಲಿ ಬೆಳಗ್ಗೆಯೇ ಅಭಿಮಾನಿಗಳ ಜೊತೆ ಕುಳಿತು ‘ಮಾರ್ಕ್’ ಸಿನಿಮಾ ವೀಕ್ಷಿಸಿ ಸಂಭ್ರಮಿಸಿದ್ದಾರೆ.

Sudeep mark movie look

ಸಿನಿಮಾದ ‘ಮಸ್ತ್ ಮಲೈಕಾ’ ಸಾಂಗ್ ಮೂಲಕ​ ಸುದೀಪ್​ ಪುತ್ರಿ ಸಾನ್ವಿ ಅವರು ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಮಗಳು ಸಾನ್ವಿ ಈ ಹಾಡಿಗೆ ಕಂಠದಾನ ಮಾಡಿದ್ದು, ತಂದೆ ಕಿಚ್ಚ‌ ಸುದೀಪ್​ ಭರ್ಜರಿ ಡ್ಯಾನ್ಸ್​​ ಮಾಡಿದ್ದಾರೆ. ಈ ಮೂಲಕ ಸಾನ್ವಿ ಸುದೀಪ್​​ ಗಾಯಕಿಯಾಗಿ ಅಧಿಕೃತವಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು, ಇಂದು ಮೊದಲ ಶೋ ವೀಕ್ಷಿಸುವ ಮೂಲಕ ಅಪ್ಪನ ಸಿನಿಮಾಗೆ ಫುಲ್​ ಸಪೋರ್ಟ್​ ಕೊಟ್ಟಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version