BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ಮುಂದಿನ ವರ್ಷ ಸರ್ಕಾರದಿಂದಲೇ ಒಕ್ಕುಂದ ಉತ್ಸವ: ಬೆಳಗಾವಿ ಡಿಸಿ ಭರವಸೆ

Author Picture
Published On: February 2, 2026

—Advertisement—

Updated By: Priyalachhi

ಬೆಳಗಾವಿ: “ಒಕ್ಕುಂದ ಗ್ರಾಮದ ಐತಿಹಾಸಿಕ ತ್ರಿಕೂಟೇಶ್ವರ ಮಂದಿರ ಜೀರ್ಣೋದ್ಧಾರಪಡಿಸಿ, ಪ್ರಸಿದ್ಧ ಪ್ರವಾಸಿ ತಾಣ ಮಾಡಲಾಗುವುದು. ಮುಂಬರುವ ವರ್ಷ ಒಕ್ಕುಂದ ಉತ್ಸವ ಸರ್ಕಾರದಿಂದಲೇ ಆಚರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದರು.

ಭಾನುವಾರ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.‌ “ಸವದತ್ತಿ ರಟ್ಟರ ಕಾಲದಲ್ಲಿ ನಿರ್ಮಾಣಗೊಂಡ ಜೈನ ಬಸದಿ ಇಲ್ಲಿದೆ. ಅದ್ಭುತ ಕೆತ್ತನೆ ಮನಸ್ಸಿಗೆ ಮುದ ನೀಡುತ್ತದೆ. ಕನ್ನಡದ ಮೊದಲ ಆದ್ಯ ಗ್ರಂಥ ಕವಿರಾಜ ಮಾರ್ಗದಲ್ಲಿ ತಿರುಳ್ಗನ್ನಡನಾಡು ಅಂತಾ ಕರೆಸಿಕೊಂಡಿದ್ದು, ವಿವಿಧ ಸಾಮ್ರಾಜ್ಯಗಳು ಆಳಿರುವ ಗತವೈಭವ ಇರುವ‌ ವಿಶಿಷ್ಟ ಗ್ರಾಮ ಒಕ್ಕುಂದ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು‌. ಶೀಘ್ರವೇ ಪುರಾತತ್ವ ಇಲಾಖೆ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಸಿ ಯೋಜನೆ ರೂಪಿಸಲಾಗುವುದು” ಎಂದರು.

“ವಿವಿಧತೆಯಲ್ಲಿ ಏಕತೆ ಹೊಂದಿರುವ ಒಕ್ಕುಂದ ಇತರೆ ಗ್ರಾಮಗಳಿಗೆ ಮಾದರಿ ಆಗಿದೆ. ಇಲ್ಲಿನ ಜನರ ಪ್ರೀತಿ, ಆತಿಥ್ಯ ಕಂಡು ನನಗೆ ತುಂಬಾ ಸಂತೋಷವಾಗಿದೆ. ಗ್ರಾಮದ ಮಕ್ಕಳ ಉತ್ಸಾಹ ಅಪರಿಮಿತವಾಗಿದೆ. ಗ್ರಾಮಸ್ಥರೇ ಸೇರಿಕೊಂಡು ಊರಿನ ಇತಿಹಾಸ ನಾಡಿಗೆ ಪರಿಚಯಿಸಲು ಕಳೆದ 11 ವರ್ಷಗಳಿಂದ ಉತ್ಸವ ಆಚರಿಸುತ್ತಿರುವುದು ಶ್ಲಾಘನೀಯ. ಬರುವ ವರ್ಷ ಇದು ಸರ್ಕಾರಿ ಉತ್ಸವ ಆಗಲಿದೆ ಎಂದು ಜಿಲ್ಲಾಧಿಕಾರಿ ಹರ್ಷ ವ್ಯಕ್ತಪಡಿಸಿದರು

“ವಿವಿಧತೆಯಲ್ಲಿ ಏಕತೆ ಹೊಂದಿರುವ ಒಕ್ಕುಂದ ಇತರೆ ಗ್ರಾಮಗಳಿಗೆ ಮಾದರಿ ಆಗಿದೆ. ಇಲ್ಲಿನ ಜನರ ಪ್ರೀತಿ, ಆತಿಥ್ಯ ಕಂಡು ನನಗೆ ತುಂಬಾ ಸಂತೋಷವಾಗಿದೆ. ಗ್ರಾಮದ ಮಕ್ಕಳ ಉತ್ಸಾಹ ಅಪರಿಮಿತವಾಗಿದೆ. ಗ್ರಾಮಸ್ಥರೇ ಸೇರಿಕೊಂಡು ಊರಿನ ಇತಿಹಾಸ ನಾಡಿಗೆ ಪರಿಚಯಿಸಲು ಕಳೆದ 11 ವರ್ಷಗಳಿಂದ ಉತ್ಸವ ಆಚರಿಸುತ್ತಿರುವುದು ಶ್ಲಾಘನೀಯ. ಬರುವ ವರ್ಷ ಇದು ಸರ್ಕಾರಿ ಉತ್ಸವ ಆಗಲಿದೆ ಎಂದು ಜಿಲ್ಲಾಧಿಕಾರಿ ಹರ್ಷ ವ್ಯಕ್ತಪಡಿಸಿದರು.

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ: ಒಕ್ಕುಂದ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಆಗಲು ಮುಗಿ ಬಿದ್ದರು. ಈ ವೇಳೆ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿಯ ಮಾತುಗಳನ್ನಾಡಿದರು. ಅದೇ ರೀತಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಚೇತನಾ ಉಳ್ಳಿಗೇರಿ ಅರಳು ಹುರಿದಂತೆ ಇಂಗ್ಲೀಷ್​ನಲ್ಲಿ ಮಾತನಾಡಿದ್ದು ಕಂಡು ಡಿಸಿ ಬೆರಗಾದರು. ನಮ್ಮ ಸರ್ಕಾರಿ ಶಾಲಾ ಮಕ್ಕಳು ಯಾವುದಕ್ಕೂ ಕಮ್ಮಿ ಇಲ್ಲ ಎಂದು ಡಿಸಿ ಸಂತಸ ವ್ಯಕ್ತಪಡಿಸಿದರು. ಅವರ ಜೊತೆಗೆ ಮಕ್ಕಳು ಫೋಟೊ ತೆಗೆಸಿಕೊಂಡರು ಸಂಭ್ರಮಿಸಿದರು.

DC MOHAMMED ROSHAN  BELAGAVI  ಒಕ್ಕುಂದ ಉತ್ಸವ  100 ಮೀಟರ್ ಕನ್ನಡ ಬಾವುಟ

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ: ಒಕ್ಕುಂದ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಆಗಲು ಮುಗಿ ಬಿದ್ದರು. ಈ ವೇಳೆ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿಯ ಮಾತುಗಳನ್ನಾಡಿದರು. ಅದೇ ರೀತಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಚೇತನಾ ಉಳ್ಳಿಗೇರಿ ಅರಳು ಹುರಿದಂತೆ ಇಂಗ್ಲೀಷ್​ನಲ್ಲಿ ಮಾತನಾಡಿದ್ದು ಕಂಡು ಡಿಸಿ ಬೆರಗಾದರು. ನಮ್ಮ ಸರ್ಕಾರಿ ಶಾಲಾ ಮಕ್ಕಳು ಯಾವುದಕ್ಕೂ ಕಮ್ಮಿ ಇಲ್ಲ ಎಂದು ಡಿಸಿ ಸಂತಸ ವ್ಯಕ್ತಪಡಿಸಿದರು. ಅವರ ಜೊತೆಗೆ ಮಕ್ಕಳು ಫೋಟೊ ತೆಗೆಸಿಕೊಂಡರು ಸಂಭ್ರಮಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp