BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಮುಡಾ ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

Author Picture
Published On: December 19, 2025

—Advertisement—

Updated By: Priyalachhi

ಬೆಂಗಳೂರು: ಮುಡಾದಲ್ಲಿ ನಡೆದ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಮೂವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ವರದಿಯ ಮೇಲೆ ಆದೇಶ ನೀಡಲು, ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಡಿಸೆಂಬರ್ 23ರೊಳಗೆ ಹಾಜರುಪಡಿಸುವಂತೆ ವಿಶೇಷ ನ್ಯಾಯಾಲಯ ಗುರುವಾರ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (SPP) ಸೂಚನೆ ನೀಡಿದೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಸೇರಿ ಇತರರಿಗೆ ಕ್ಲೀನ್‌ಚಿಟ್‌ ನೀಡಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ನ ಆಕ್ಷೇಪಣಾ ಅರ್ಜಿ ಕುರಿತು ನ್ಯಾಯಾಲಯ ಗುರುವಾರ ವಿಚಾರಣೆ ನಡೆಸಿತು.

ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ. ಹೀಗಾಗಿ ಮುಂದಿನ ವಿಚಾರಣೆಯೊಳಗೆ ಕೇಸ್ ಡೈರಿಯನ್ನು ಸಲ್ಲಿಸಬೇಕು. ಮಧ್ಯಂತರದಲ್ಲಿ ದೂರುದಾರರು ಅಥವಾ ಜಾರಿ ನಿರ್ದೇಶನಾಲಯ (ED) ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಹೇಳಿದರು. ಇದೇ ವೇಳೆ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ವೆಂಕಟೇಶ್ ಅರ್ಬಟ್ಟಿ ಸ್ಥಿತಿಗತಿ ವರದಿ ಸಲ್ಲಿಸಿ, ತನಿಖೆ ಅಂತಿಮ ಹಂತದಲ್ಲಿದ್ದು ಅನುಮತಿ ಆದೇಶ (ಸ್ಯಾಂಕ್ಷನ್) ಪಡೆಯಬೇಕಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp