BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ

Author Picture
Published On: April 18, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಭುಗಿಲೆದ್ದಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡುವ ವಿಚಾರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಈ ವೇಳೆ, ‘ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಜಮೀರ್‌ ರಾಜೀನಾಮೆ ಬಗ್ಗೆ ಗೊತ್ತಿಲ್ಲ

ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ವಿಚಾರವಾಗಿ ಹಬ್ಬಿರುವ ವದಂತಿಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಈ ವಿಚಾರವನ್ನು ಪತ್ರಿಕೆಗಳಲ್ಲಿ ಮಾತ್ರ ನೋಡಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ವೈಯಕ್ತಿಕ ಕೆಲಸಗಳ ನಿಮಿತ್ತ ಸಭೆಯ ನಂತರ ನಾನು ಅಲ್ಲಿಂದ ಹೊರಟಿದ್ದೆ, ಹೀಗಾಗಿ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಏನೇ ಇದ್ದರೂ ಹೈಕಮಾಂಡ್ ಮತ್ತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ,’ ಎಂದು ತಿಳಿಸಿದರು.

ಮುಸ್ಲಿಂ ನಾಯಕರ ಟಾರ್ಗೆಟ್‌ ಇಲ್ಲ

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತ ನಾಯಕರು ಟಾರ್ಗೆಟ್ ಆಗುತ್ತಿದ್ದಾರೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಪ್ರತಿ ಹಂತದಲ್ಲೂ ಮುಸ್ಲಿಂ ನಾಯಕರಿಗೆ ಬೆನ್ನೆಲುಬಾಗಿ ನಿಂತಿದೆ ಎಂದರು. ಅಂತೆಯೇ ಮುಸ್ಲಿಂ ನಾಯಕರು ಟಾರ್ಗೆಟ್ ಆಗಿಲ್ಲ. ಅವರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಪ್ರತಿ ಹಂತದಲ್ಲಿ ಬೆನ್ನೆಲುಬಾಗಿ ನಿಂತಿದ್ದೇವೆ. ಹಿಂದೆಯೂ ಮಾಡಿಲ್ಲ, ಮುಂದೆ ಯಾರೂ ಮಾಡಲೂ ಸಾಧ್ಯವಿಲ್ಲ ಎಂದು ಹೇಳಿದರು.

ಅದು ಅವರ ಸೀಟ್ ಅಲ್ಲ..

ದಾವಣಗೆರೆ ದಕ್ಷಿಣ ಅದು ಅಲ್ಪಸಂಖ್ಯಾತರ ಸೀಟ್ ಅಲ್ಲ. ಅಲ್ಲಿ ಶಾಮನೂರು ಶಿವಶಂಕರಪ್ಪ 40 ವರ್ಷಗಳಿಂದ ಕ್ಷೇತ್ರವನ್ನ ಕಾಪಾಡಿಕೊಂಡು ಬಂದಿದ್ದಾರೆ. ಅವರ ಜನಸಂಖ್ಯೆ ಇತ್ತು ನಿಜ.. ಅವರು ಕೇಳಿದ್ದು ತಪ್ಪಿಲ್ಲ. ಅಲ್ಪಸಂಖ್ಯಾತ ಕೆಲವು ನಾಯಕರು ಟಿಕೆಟ್ ಕೇಳಿದ್ದರು. ಆದರೆ ಬಳಿಕ ನಡೆದ ಚರ್ಚೆಯಲ್ಲಿ ಅವರು ಒಪ್ಪಿದ ಮೇಲೆಯೇ ಸಮರ್ಥ್ ಗೆ ಟಿಕೆಟ್ ನೀಡಿದೆ. ಕೆಲವು ರಿಪೊರ್ಟ್ ಗಳ ಆಧಾರದ ಮೇಲೆ ಪಕ್ಷ ಕ್ರಮ ತೆಗೆದುಕೊಂಡಿದೆ ಅಷ್ಟೇ ಎಂದು ಡಿಕಿ ಶಿವಕುಮಾರ್ ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp