• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೆಟ್ರೋ, ಸುರಂಗ ಮಾರ್ಗದಿಂದ ಲಾಲ್​ಬಾಗ್​ಗೆ ಧಕ್ಕೆಯಿಲ್ಲ: ಡಿ.ಕೆ.ಶಿವಕುಮಾರ್​

Sambrama Prabha News by Sambrama Prabha News
January 15, 2026
in Politics
0
ಮೆಟ್ರೋ, ಸುರಂಗ ಮಾರ್ಗದಿಂದ ಲಾಲ್​ಬಾಗ್​ಗೆ ಧಕ್ಕೆಯಿಲ್ಲ: ಡಿ.ಕೆ.ಶಿವಕುಮಾರ್​

Updated By: Priyalachhi 

ಬೆಂಗಳೂರು: ಮೆಟ್ರೋ, ಸುರಂಗ ಮಾರ್ಗದಿಂದ ತೊಂದರೆ ಇಲ್ಲ. ಈ ಭಾಗದಲ್ಲಿ ಮೆಟ್ರೋ ಹಾಗೂ ಸುರಂಗದಿಂದ ಲಾಲ್​ಬಾಗ್​ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.

ಬೆಂಗಳೂರಿನ ಲಾಲ್​​ಬಾಗ್​​ನಲ್ಲಿ ಏರ್ಪಡಿಸಲಾಗಿರುವ ಪೂರ್ಣಚಂದ್ರ ತೇಜಸ್ವಿ ಕುರಿತ ತೇಜಸ್ವಿ ವಿಸ್ಮಯ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಲಾಲ್​​ಬಾಗ್​ ಐತಿಹಾಸಿಕ ಉದ್ಯಾನವಾಗಿದ್ದು, ಅದನ್ನು ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರಿಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರ್ಕಾರ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದರು.

ಬೆಂಗಳೂರಿನ ನಾಗರೀಕರು, ಶಾಲಾ ಮಕ್ಕಳು, ವಿದ್ಯಾರ್ಥಿಗಳು 10 ದಿನಗಳ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಇದಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಮನವಿ ಮಾಡುತ್ತೇನೆ. ಈ ಉತ್ತಮ ಕೆಲಸ ಮಾಡಿಕೊಂಡು ಬಂದಿರುವ ಸ್ಥಳೀಯ ಶಾಸಕರು, ಸಚಿವರಾದ ರಾಮಲಿಂಗಾರೆಡ್ಡಿ, ಯುವರಾಜ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಸವಣ್ಣ ಹೆಸರಿನಲ್ಲಿ ಉದ್ಯಾನ: ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್​ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ.

DK Shivakumar inaugurated the Tejaswi Vismaya flower exhibition

ಬೆಂಗಳೂರು ಉದ್ಯಾನ ನಗರಿ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ(ಜಿಬಿಎ), ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್​ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Tags: ಮೆಟ್ರೋ
Previous Post

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

Next Post

ಗುರುವಾರದ ರಾಶಿ-ಭವಿಷ್ಯ ಪಂಚಾಂಗ

Next Post
ಗುರುವಾರದ ರಾಶಿ-ಭವಿಷ್ಯ ಪಂಚಾಂಗ

ಗುರುವಾರದ ರಾಶಿ-ಭವಿಷ್ಯ ಪಂಚಾಂಗ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.