BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಮೆಟ್ರೋ ಸೇರಿ ಬೆಂಗಳೂರಿನ ವಿವಿಧ ಯೋಜನೆಗಳಿಗೆ ಬೆಂಬಲಿಸುವಂತೆ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ

Author Picture
Published On: December 24, 2025

—Advertisement—

Updated By: Priyalachhi

ದೆಹಲಿ/ಬೆಂಗಳೂರು: ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿ (Treatment and Disposal of Legacy Leachate) ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್, ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು.

ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ (Revised Completion Cost) 26,405 ಕೋಟಿ ರೂ.ಗಳಿಂದ 40,425 ಕೋಟಿ ರೂ.ಗಳ ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ 5.06.2025ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ 09.06.2025ರಂದು ಕಳುಹಿಸಲಾಗಿದ್ದು, ಅದಕ್ಕೆ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ 10.01.2025ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಬಳಿಕ 15.01.2025ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಪತ್ರದಲ್ಲಿ ಡಿಸಿಎಂ ಮನವಿ ಮಾಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp