Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Politics Home Latest News

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Sambrama Prabha NewsBy Sambrama Prabha NewsMay 18, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಒಪ್ಪಿದೆ. ಅಲ್ಲದೆ, 26 ತಿಂಗಳ ವೇತನ ಹಿಂಬಾಕಿಯ ಮೊದಲ ಕಂತಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ನೌಕರರು ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳು ಈಡೇರದ ಹೊರತು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಬ್ಬಂದಿಗೆ ಸರ್ಕಾರ ಖಡಕ್ ಎಚ್ಚರಿಕೆ

ಮೇ.20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ನೌಕರರಿಗೆ ರಾಜ್ಯ ಸರ್ಕಾರ ಕಠಿಣ ಎಚ್ಚರಿಕೆ ನೀಡಿದೆ.

ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಹೇಳಿದೆ.

ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂ ಪಾಷಾ ಆದೇಶಿಸಿದ್ದಾರೆ.

ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಮೇ 20ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಬೇಕು. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಿ. ಅನಿವಾರ್ಯ ಸಂದರ್ಭದಲ್ಲಿ ಅಥವಾ ಅವಶ್ಯವಿದ್ದಲ್ಲಿ, ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವಂತೆ ಅಕ್ರಂ ಪಾಷಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯವರು ಆಡಳಿತ ವರ್ಗಕ್ಕೆ ನೀಡಿರುವ ಮುಷ್ಕರದ ನೋಟಿಸ್ ಸಂಬಂಧಪಟ್ಟ ವಿವಾದವು ಸದ್ಯ ರಾಜ್ಯದ ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನದಲ್ಲಿದ್ದು, ಕೈಗಾರಿಕಾ ವಿವಾದಗಳ ಕಾಯಿದೆ-1947 ಮತ್ತು ನಿಯಮಗಳನ್ವಯ ‘ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ’ ಯ ನೌಕರರ ಮುಷ್ಕರದ ನೋಟಿಸ್‌ ಸಂಬಂಧಪಟ್ಟ ವಿವಾದವು ರಾಜಿ ಸಂಧಾನದಲ್ಲಿ ರುವಾಗ ನೌಕರರು ಮುಷ್ಕರ ಹೂಡುವಂತಿಲ್ಲ.

ಹೀಗಾಗಿ ನಿಗಮದ ನೌಕರರು ಯಾವುದೇ ಕಾರಣಕ್ಕೂ ಉದ್ದೇಶಿತ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಬಾರದು. ಮತ್ತು ತಮ್ಮ ದೈನಂದಿನ ಕರ್ತವ್ಯಕ್ಕೆ ಅವಶ್ಯ ಹಾಜರಾಗಿ, ರಾಜ್ಯದ ಜನರ ಪ್ರೀತಿ ವಿಶ್ವಾಸಕ ಪಾತ್ರರಾಗಬೇಕಾಗಿ ಮನವಿ ಮಾಡಲಾಗಿದೆ.

ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಾರಿಗೆ ನೌಕರ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು
Next Article ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ವಾಹನ ಸವಾರರ ಪರದಾಟ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.