BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಯತೀಂದ್ರ ಅವರೇ ನಮ್ಮ ಹೈಕಮಾಂಡ್: ಡಿಕೆಶಿ

Author Picture
Published On: February 6, 2026

—Advertisement—

Updated By: Priyalachhi

ಮಂಗಳೂರು: ಯತೀಂದ್ರರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಅವರ ಮಾತನ್ನೇ ಗೌರವದಿಂದ ಸ್ವೀಕರಿಸೋಣ. ಈ ಬಗ್ಗೆ ನನಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ. ದೆಹಲಿಯವರು ಪ್ರತಿಕ್ರಿಯೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ, ನಾಯಕತ್ವ ಬದಲಾವಣೆ ಮಾಡಲ್ಲ ಎಂದು ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ ಎಂಬ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ ಎಂದು ಹೇಳಿದರು.

ಮಾರ್ಚ್‌ನಲ್ಲಿ ಪಕ್ಷದ 100 ಕಚೇರಿಗಳಿಗೆ ಚಾಲನೆ: ಪುತ್ತೂರಿನಲ್ಲಿ ಪಕ್ಷದ ಒಂದು ಕಚೇರಿಯ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿದೆ. ಮಾರ್ಚ್‌ನಲ್ಲಿ ರಾಜ್ಯಾದ್ಯಂತ ಪಕ್ಷದ 100 ಕಚೇರಿಗಳಿಗೆ ಭೂಮಿ ಪೂಜೆ ನಡೆಸಲು ನಿರ್ದೇಶನ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಮಾರ್ಚ್ 10 ತಮ್ಮ ರಾಜಕೀಯ ಜೀವನದಲ್ಲಿ ವಿಶೇಷ ದಿನ ಎಂದ ಅವರು, “ಮಾರ್ಚ್ 10ಕ್ಕೆ ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತವೆ. ಆ ನೆನಪಿನಲ್ಲಿ ಈ ಎಲ್ಲಾ ಭೂಮಿ ಪೂಜೆ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿದ್ದೇವೆ” ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp