• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Sambrama Prabha News by Sambrama Prabha News
January 23, 2026
in Latest News
0
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ನಿಯಮಗಳನ್ನು ರೂಪಿಸದ ಹೊರತು, ಬೈಕ್ ಟ್ಯಾಕ್ಸಿಗಳನ್ನು ಬಳಕೆ ಮಾಡುವಂತಿಲ್ಲ ಎಂಬುದಾಗಿ ಆದೇಶಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ(ಟ್ಯಾಕ್ಸಿ)ಗಳನ್ನಾಗಿ ಬಳಸುವುದಕ್ಕೆ ಷರತ್ತಿನ ಅನುಮತಿ ನೀಡಬಹುದು ಎಂದು ಆದೇಶಿಸಿದೆ.

ಅಲ್ಲದೆ, ಬಗ್ಗೆ ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್​​ಗಳು ಸಾರಿಗೆ ದ್ವಿಚಕ್ರ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಬೇಕು. ಅದಕ್ಕೆ ಸರ್ಕಾರ ಕಾನೂನಿನಡಿ ಷರತ್ತುಗಳನ್ನು ವಿಧಿಸಿ, ಬೈಕ್ ಟ್ಯಾಕ್ಸಿ ಚಲಾಯಿಸಲು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದು ಮಾಡುವಂತೆ ಕೋರಿ ಓಲಾ, ಉಬರ್ ಸೇರಿದಂತೆ ವಿವಿಧ ಅಗ್ರಿಗ್ರೇಟರ್​​ಗಳು, ಬೈಕ್ ಟ್ಯಾಕ್ಸಿಗಳ ಮಾಲೀಕರು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದ ನ್ಯಾಯಪೀಠ, ಓಲಾ, ಊಬರ್ ಮತ್ತಿತರ ಅಗ್ರಿಗೇಟರ್​ಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮಾನ್ಯ ಮಾಡಿ, ಈ ಆದೇಶ ಹೊರಡಿಸಿದೆ. ಅಲ್ಲದೆ, ಸಂಬಂಧಪಟ್ಟ ಪ್ರಾಧಿಕಾರಗಳು ನಿಯಮಗಳನ್ನು ರೂಪಿಸಿಲ್ಲ, ಪರಿಶೀಲಿಸಬೇಕಾಗಿದೆ ಎಂಬ ಕಾರಣ ನೀಡಿ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ, ಅನುಮತಿ ನಿರಾಕರಿಸುವಂತಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 74(2)ರ ಪ್ರಕಾರ ಅಗತ್ಯವೆಂದು ಕಂಡುಬರುವ ಷರತ್ತುಗಳನ್ನು ವಿಧಿಸಬಹುದು. ಅಗ್ರಿಗೇಟರ್​ಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದಾರೆ. ಅಂತಹ ಅರ್ಜಿಗಳನ್ನು ಈ ಆದೇಶದಲ್ಲಿನ ನ್ಯಾಯಾಲಯದ ಅವಲೋಕನಗಳು ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಲಾಗಿದೆ.

Tags: ಹೈಕೋರ್ಟ್
Previous Post

ದುನಿಯಾ ವಿಜಯ್ ಮುಖ್ಯಭೂಮಿಕೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇಂದು ಅದ್ಧೂರಿಯಾಗಿ ತೆರೆಕಂಡಿದೆ

Next Post

ಮೈಸೂರು-ಬೆಳಗೊಳ-ಕುಶಾಲನಗರ ರೈಲ್ವೆ ಯೋಜನೆಗೆ ತಡೆ

Next Post
ಮೈಸೂರು-ಬೆಳಗೊಳ-ಕುಶಾಲನಗರ ರೈಲ್ವೆ ಯೋಜನೆಗೆ ತಡೆ

ಮೈಸೂರು-ಬೆಳಗೊಳ-ಕುಶಾಲನಗರ ರೈಲ್ವೆ ಯೋಜನೆಗೆ ತಡೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.