ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ  ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20)  ಮೇ 22ರವರೆಗೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್

ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಮೇ20) ಮತ್ತು ಮೇ 21ರಂದು ವೇಳೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್  ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಗರಿಷ್ಠ 39°C ನಿಂದ 42°C ವರೆಗೆ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಆದರೆ ಸಂಜೆ ವೇಳೆ ತಂಪಾದ ಗಾಳಿ ಅಥವಾ ಹಗುರ ಮುಂಗಾರು ಪೂರ್ವ ಮಳೆಯಾಗಬಹುದು.ಮೇ 20 ಮತ್ತು 21ರ ವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು 22 ರಿಂದ 24ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version