—Advertisement—

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ “ಸ್ಫೋಟಕ” ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

Author Picture
Published On: November 22, 2025

—Advertisement—

Updated By: Priyalachhi

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷದ ನಡುವೆ ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ “ಸ್ಫೋಟಕ” ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜೆಡಿ(ಎಸ್) ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದರು.

ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp