BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

,

ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

Author Picture
Published On: November 15, 2025

—Advertisement—

Updated By: Priyalachhi

ಬೆಂಗಳೂರು: “ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್​ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್​ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಜನರಿಗೆ ತಿಳಿಸಲಿದೆ. ನಾನು ಪುಸ್ತಕವನ್ನು ಪೂರ್ತಿ ಓದುವೆ” ಎಂದು ತಿಳಿಸಿದರು.

ಮುಂದುವರೆದ ಸಿಎಂ, “ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು” ಎಂದು ವಿವರಿಸಿದರು.

“ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ” ಎಂದು ಟೀಕಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp