BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ರಾಜ್ಯದ ಹಲವು ವಿಚಾರಗಳ ಬಗ್ಗೆ ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿಕೆಶಿ

Author Picture
Published On: November 29, 2025

—Advertisement—

Updated By: Priyalachhi

ಬೆಂಗಳೂರು: “ರಾಜ್ಯದ ಹಲವು ವಿಚಾರಗಳ ಸಂಬಂಧ ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಹೋಗುತ್ತೇನೆ” ಎಂದು ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಬಳಿಕ ದೆಹಲಿಗೆ ತೆರಳುವ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯಿಸುತ್ತಾ, “ರಾಜ್ಯದ ಹಲವು ವಿಚಾರಗಳ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ತೆರಳುತ್ತಿದ್ದೇನೆ” ಎಂದು ತಿಳಿಸಿದರು.

ಮುಂದುವರೆದು, “ಕೇಂದ್ರಕ್ಕೆ ಸರ್ವಪಕ್ಷ ಸಭೆ ಕರೆದೊಯ್ಯಬೇಕು ಅಂತನೂ ಇದ್ದೇವೆ. ಇದರ ಬಗ್ಗೆನೂ ನಾನೂ ಸಿಎಂ ಚರ್ಚೆ ಮಾಡಿದ್ದೇವೆ. ಮೆಕ್ಕೆಜೋಳ,‌ ಕಬ್ಬು ಇತರೆ ವಿಚಾರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಚರ್ಚೆ ಆಗಿದೆ” ಎಂದೂ ತಿಳಿಸಿದರು.

“ಎಸ್.ಎಂ. ಕೃಷ್ಣಾ ಅವರ ವರ್ಷದ ಕಾರ್ಯಕ್ಕೆ ಇಡೀ ಕುಟುಂಬ ಬಂದಿದ್ದೇವೆ ಎಂದು ಇದೇ ವೇಳೆ ತಿಳಿಸಿದ ಡಿಸಿಎಂ, ಭೂವರಹಾ ಸ್ವಾಮಿ ದೇವಸ್ಥಾನಕ್ಕೆ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ “ನಮಗೆ ಎಲ್ಲಿ ನಂಬಿಕೆ ಇದೆಯೋ ಅಲ್ಲಿಗೆ ಹೋಗುತ್ತೇವೆ. ಎಲ್ಲ ಧರ್ಮಗಳ ಮೇಲೂ ನಮಗೆ ನಂಬಿಕೆ ಇದೆ, ರಾಜಕಾರಣ ಏನಿಲ್ಲ. ಏನಿದ್ದರೂ ಜನರ ಸೇವೆ, ಆಡಳಿತ ಅಷ್ಟೇ” ಎಂದರು.

ಕೊನೆಗೆ, “ಸಿಎಂಗೆ ಊಟಕ್ಕೆ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ. ನಿಮಗೆ ಹೇಳದೆ ದಿನಾಂಕ ನಿಗದಿ ಮಾಡಕ್ಕಾಗುತ್ತಾ” ಎಂದು ಪ್ರಶ್ನಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp