BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ರಾಜ್ಯ ಸರ್ಕಾರ ರೈತರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದೆ: ಪ್ರಲ್ಹಾದ್ ಜೋಶಿ

Author Picture
Published On: November 22, 2025

—Advertisement—

Updated By: Priyalachhi

ಹುಬ್ಬಳ್ಳಿ: ರಾಜ್ಯ ಸರ್ಕಾರ ರೈತರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದೆ. ಅನುಭವ ಇರೋ ವ್ಯಕ್ತಿ ವಿಚಾರ ಮಾಡಿ ಮಾತನಾಡಬೇಕು. ಆದ್ರೆ ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತನಾಡಿದ್ದಾರೆ. ಮೆಕ್ಕೆಜೋಳ 70 ಲಕ್ಷ ಟನ್ ಆಮದು ಮಾಡಿಕೊಂಡಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಸುಳ್ಳು ಹೇಳಲಿಕ್ಕಾದ್ರು ಏನಾದ್ರು ಬೇಕು‌. ನಾವು ಈ ವರ್ಷ ₹900 ಕೋಟಿ ಮೌಲ್ಯದ ಮೆಕ್ಕೆಜೋಳ ರಪ್ತು ಮಾಡಿದ್ದೇವೆ. ನಾಪೆಡ್​​ನವರು ಖರೀದಿ ಮಾಡಲು ತಯಾರಿದ್ದಾರೆ. ಅದಕ್ಕೆ ಇಂಡೆಂಟ್ ರಾಜ್ಯ ಸರ್ಕಾರ ಕೊಡಬೇಕು, ಕೊಟ್ಟಿಲ್ಲ. ಖಾನೇ ಕೆ ಲಿಯೇ ಮೈ ಲಡನೇ ಕೆ ಲಿಯೇ ಬಡಾ ಬಾಯಿ ಅನ್ನೋದು ಸಿದ್ದರಾಮಯ್ಯ ಸಿದ್ಧಾಂತವಾಗಿದೆ ಎಂದು ಲೇವಡಿ ಮಾಡಿದರು.

ರಾಜ್ಯ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ: ರಾಜ್ಯ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಗೃಹಲಕ್ಷ್ಮಿ ಹಣ ಆಗಸ್ಟ್​ನಿಂದ ಬಾಕಿಯಿದೆ. ರಾಜ್ಯ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಂಗಳೂರಲ್ಲಿ ಹಾಡಹಗಲೇ ರಾಬರಿ ಆಗ್ತಿವೆ. ಸರ್ಕಾರಕ್ಕೆ ಆಡಳಿತದ ಮೇಲೆ ಗಮನ ಕಡಿಮೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಶಾಸಕರು ಚೀಟಿ ಕೊಟ್ಟು ಟ್ರಾನ್ಸ್​ಫರ್​ ಮಾಡಿಸ್ತಿದ್ದಾರೆ ಎಂದು ಆರೋಪಿಸಿದರು.

ಪ್ರಚಂಡ ಬಹುಮತ ಕೊಟ್ಟ ಜನರಿಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ. ಶಾಸಕರ ಖರೀದಿಗೆ ಪರಸ್ಪರ ನಾಯಕರು ಇಳಿದಿದ್ದಾರೆ. ಜೈಲಿಗೆ ಹೋಗಿ ಶಾಸಕರನ್ನು ಭೇಟಿಯಾಗ್ತಿದ್ದಾರೆ. ವೋಟಿಂಗ್ ಬಂದ್ರೆ ಬೆಂಬಲ ಇರಲಿ ಅಂತ ಭೇಟಿ ಮಾಡ್ತಿದ್ದಾರೆ. ವೋಟಿಂಗ್​ನಲ್ಲಿ ತಮ್ಮ ತಮ್ಮ ನಂಬರ್​ ಜೋಡಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದರು.

ನಾವು ಸರ್ಕಾರ ಬೀಳಬೇಕು ಅಂತ ಬಯಸಲ್ಲ: ನಾನು ಸಿಎಂ ಆಗಿ ಮುಂದುವರೆಯುತ್ತೇನೆ ಅಂತ ಸಿದ್ದರಾಮಯ್ಯ ದೆಹಲಿಗೆ ಹೋಗ್ತಿದ್ದಾರೆ. ಅವರನ್ನು ತೆಗೆಯಿರಿ ಅಂತ ಡಿ.ಕೆ ಶಿವಕುಮಾರ್ ಹೋಗ್ತಿದ್ದಾರೆ. ನಿಮಗೆ ಆಡಳಿತ ನಡೆಸಲು ಆಗದೇ ಇದ್ದರೆ ಬಿಟ್ಟು ಹೋಗಿ. ಸರ್ಕಾರ ಬೇಗನೆ ಬಿದ್ದು ಹೋಗಲಿ ಅನ್ನೋದು ನಮ್ಮ ಉದ್ದೇಶವಲ್ಲ. ರಾಜ್ಯದಲ್ಲಿ ಇದೀಗ ಶಾಸಕರ ಖರೀದಿ ಜೋರಾಗಿದೆ. ರಾಜ್ಯದಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ ಹುಟ್ಟಲ್ಲ. ನಾವು ಯಾವುದೇ ಕಾರಣಕ್ಕೂ ಈ ಸರ್ಕಾರ ಬೀಳಬೇಕು ಅಂತ ಬಯಸಲ್ಲ. ಜನ ಅವರಿಗೆ ಬಹುಮತ ನೀಡಿದ್ದಾರೆ, ಅವರು ಐದು ವರ್ಷ ಅಧಿಕಾರ ನಡೆಸಲಿ ಎಂದು ಜೋಶಿ ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp