Updated By: Priyalachhi

ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version