Updated By: Priyalachhi

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾಗೌಡಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದ್ದು, ಅವರಿಗೆ ನೀಡಿದ್ದ ಮನೆ ಊಟ ಸವಲತ್ತನ್ನು ದಿಢೀರ್ ರದ್ದು ಮಾಡಿದೆ.

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾ ಗೌಡ ಪರವಾಗಿ ವಕೀಲರು ಇತ್ತೀಚೆಗೆ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಇದರ ಜತೆ ನಾಗರಾಜು ಮತ್ತು ಲಕ್ಷ್ಮಣ್ ಕೂಡ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು.

ಕೋರ್ಟ್‌ ಪವಿತ್ರಾ ಗೌಡ ಹಾಗೂ ಇತರೆ ಇಬ್ಬರಿಗೆ ಮನೆಯೂಟ ನೀಡಬೇಕೆಂದು ಆದೇಶ ನೀಡಿತ್ತು. ಮೊದಲು ದಿನಕ್ಕೊಮ್ಮೆ ಮನೆಯೂಟ ನೀಡುವ ಆದೇಶ ನೀಡಲಾಗಿತ್ತು. ಆ ಬಳಿಕ ಆದೇಶವನ್ನು ಮಾರ್ಪಾಟು ಮಾಡಿ ವಾರಕೊಮ್ಮೆ ಮಾತ್ರ ಮನೆಯೂಟ ನೀಡಬೇಕೆಂದು 57ನೇ ಸಿಸಿಎಚ್ ನ್ಯಾಯಾಲಯ ಹೇಳಿತ್ತು.

ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.

57ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್​​ ಮೊರೆ ಹೋಗಿದ್ದರು. ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು. ಒಂದು ವೇಳೆ ಪವಿತ್ರಾ ಗೌಡ ಮತ್ತು ಇತರರಿಗೆ ಮನೆಯೂಟ ನೀಡಿದರೆ ಇತರೆ ಆರೋಪಿಗಳು ಬೇಡಿಕೆ ಇಡುತ್ತಾರೆ. ಆಗ ಜೈಲಿನ ಶಿಸ್ತು ಸಡಿಲವಾಗುತ್ತದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಪವಿತ್ರಾ ಗೌಡ ಮತ್ತು ಇರೆ ಇಬಬರು ಆರೋಪಿಗಳಿಗೆ ಮನೆ ಊಟಕ್ಕೆ ಅವಕಾಶ ನೀಡಿದರೆ ಜೈಲಿನ ಇತರೆ ಕೈದಿಗಳೂ ಸಹ ಮನೆ ಊಟಕ್ಕೆ ಬೇಡಿಕೆ ಇಡುತ್ತಾರೆ, ಜೈಲಿನ ಶಿಸ್ತು ಸಡಿಲವಾಗುತ್ತದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version