Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರೈತರಿಗೆ ಸಿಗಬೇಕಾದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ! ಅಕ್ರಮ ಯೂರಿಯಾ ದಾಸ್ತಾನು ಮೇಲೆ DRI ಅಧಿಕಾರಿಗಳ ತಂಡ ದಾಳಿ
Latest News

ರೈತರಿಗೆ ಸಿಗಬೇಕಾದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ! ಅಕ್ರಮ ಯೂರಿಯಾ ದಾಸ್ತಾನು ಮೇಲೆ DRI ಅಧಿಕಾರಿಗಳ ತಂಡ ದಾಳಿ

Sambrama Prabha NewsBy Sambrama Prabha NewsDecember 17, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು : ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಯೂರಿಯಾ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. 200 ರೂ. ಯೂರಿಯಾ 1,500 ರೂ.ಗೆ ಮಾರಾಟ ಮಾಡುತ್ತಿದ್ದ ಜಾಲವನ್ನು DRI (ಕಂದಾಯ ಗುಪ್ತಚರ ನಿರ್ದೇಶನಾಲಯ) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಅಕ್ರಮವಾಗಿ ಸಂಗ್ರಹಿಸಿದ್ದ 19 ಟನ್ ಯೂರಿಯಾವನ್ನು ವಶಕ್ಕೆ ಪಡೆದಿದೆ.

ರಾಜ್ಯಕ್ಕೆ ವಿನಾಯಿತಿ ದರದಲ್ಲಿ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು. ಕಿಲೋಮೀಟರ್​​ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ಮಂದಿ ರೈತರು ಹಿಂದಿರುಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.

ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ದಾಸ್ತಾನು ಮೇಲೆ ಮಂಗಳವಾರ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.

DRI team raid an illegal urea stockpile
ಈ ಗೋದಾಮನ್ನು 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್​​ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುತ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್​ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಈ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 1500 ರೂಪಾಯಿಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 1500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ದಾಳಿ ವೇಳೆ ತಿಳಿದು ಬಂದಿದೆ.

ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ಜಿಲ್ಲೆಗಳ ನೋಂದಾಯಿತ ಡೀಲರ್ಸ್​ಗೆ ಸರಬರಾಜು ಮಾಡುತ್ತದೆ. ಡೀಲರ್ಸ್ ಮೂಲಕ ರೈತರಿಗೆ ರಸಗೊಬ್ಬರ ಸಿಗುತ್ತದೆ. ರೈತರಿಗೆ ಸಿಗಬೇಕಾದ ಯೂರಿಯಾ ದಂಧೆಕೊರರಿಗೆ ಸಿಕ್ಕಿದ್ದು ಹೇಗೆ ಎಂದು ಸ್ಥಳೀಯರು ಪ್ರಶ್ನೆ ಮಾಡಲಾಂಭಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಯೂರಿಯಾ ರೈತ
Add as Preferred on Google Follow on Google News
Share. WhatsApp Facebook Twitter Telegram
Previous Articleಸಾರಿಗೆ ಬಸ್ ಸೇವೆ ವಂಚಿತ ಗ್ರಾಮಗಳು: ರಾಜ್ಯದಲ್ಲಿ 1,749 ಗ್ರಾಮಗಳಿಗೆ ನೇರ ರಸ್ತೆ ಸಾರಿಗೆ ಬಸ್ ಸೌಲಭ್ಯವೇ ಇಲ್ಲ!
Next Article ಹೊಸ ವರ್ಷ 2026 ಸಂಭ್ರಮಾಚರಣೆ: ಬೆಂಗಳೂರು ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.