Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ವನ್ಯಜೀವಿಗಳಿಂದ ಬೆಳೆ ಹಾನಿ, ಶೀಘ್ರ ಪರಿಹಾರ ನೀಡಲು ಸಚಿವ ಖಂಡ್ರೆ ಸೂಚನೆ
Politics

ವನ್ಯಜೀವಿಗಳಿಂದ ಬೆಳೆ ಹಾನಿ, ಶೀಘ್ರ ಪರಿಹಾರ ನೀಡಲು ಸಚಿವ ಖಂಡ್ರೆ ಸೂಚನೆ

Sambrama Prabha NewsBy Sambrama Prabha NewsApril 20, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದಲ್ಲಿ ಆನೆ ಸೆರೆ ತಂಡ ಸ್ಥಾಪನೆ ಕಾರ್ಯ ಸಾಧ್ಯ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ, ವನ್ಯ ಜೀವಿಗಳಿಂದ ಬೆಳೆ ಹಾನಿ, ಶೀಘ್ರ ಪರಿಹಾರ ನೀಡಲು ಸೂಚಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯ ಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್​​ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ಒದಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾನುವಾರ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆನೆ, ಕಾಡೆಮ್ಮೆ, ಕಾಡುಕೋಣ, ಹಂದಿಗಳಿಂದ ತೀವ್ರ ಬೆಳೆ ಹಾನಿ ಆಗುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ಪ್ರಾಮಾಣಿಕವಾಗಿ ಬೆಳೆ ಹಾನಿಯ ನಿರ್ಧಾರ ಮಾಡಬೇಕು ಎಂದರು.

ಪ್ರಸ್ತುತ ವೃತ್ತಕ್ಕೆ 1 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಬಾಕಿ ಇರುವ ಎಲ್ಲ ಬೆಳೆ ಹಾನಿ ಪರಿಹಾರ ನೀಡುವಂತೆ ಸೂಚಿಸಿದ ಅವರು, ಆನೆ ನಿಗ್ರಹ ಕಂದಕ, ಸೌರ ತಂತಿ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡುವಂತೆಯೂ ತಿಳಿಸಿದರು.

ಆನೆ ಸೆರೆ ತಂಡ: ಮೂಡಿಗೆರೆ, ಕೊಪ್ಪ ಮೊದಲಾದ ಕಡೆಗಳಲ್ಲಿ ಆನೆ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲೇ ಒಂದು ಆನೆ ಸೆರೆ ಕಾರ್ಯತಂಡ ಸ್ಥಾಪಿಸುವ ಬಗ್ಗೆ ಪರಿಶೀಲಿಸಿ, ಕಾರ್ಯಸಾಧ್ಯ ವರದಿ ಕೇಳಿದ ಸಚಿವರು, ಹೊಸದಾಗಿ ಮಾಡಿರುವ ಆನೆ ಕಾರ್ಯಪಡೆ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬ ಬಗ್ಗೆಯೂ ವರದಿ ಸಲ್ಲಿಸಲು ತಿಳಿಸಿದರು.

ರೈಲ್ವೆ ಬ್ಯಾರಿಕೇಡ್ ಅಧ್ಯಯನ ಅಗತ್ಯ: ತಾವು ಸಚಿವರಾದ ತರುವಾಯ, ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಆನೆಗಳ ಉಪಟಳ ಇರುವ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಹಣ ಮಂಜೂರು ಮಾಡಿಸಿದ್ದು, ಕಾಮಗಾರಿಯೂ ಆಗಿದೆ. ಯಾವ ಯಾವ ವಲಯದಲ್ಲಿ ಎಷ್ಟು ಕಿಲೋ ಮೀಟರ್ ಬ್ಯಾರಿಕೇಡ್ ಹಾಕಲಾಗಿದೆ ಮತ್ತು ಬ್ಯಾರಿಕೇಡ್ ಅಳವಡಿಸಿದ ತರುವಾಯ ಆನೆ, ಕಾಡು ಕೋಣ ಹಾವಳಿ ಕಡಿಮೆ ಆಗಿದೆಯೇ ಎಂಬ ಬಗ್ಗೆ ಅಧಿಕಾರಿಗಳ ತಂಡ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದರು.

ವನ್ಯಜೀವಿಗಳ ಸಾವಿಗೆ ಕಾರಣವಾಗುವ ಉರುಳು ಅಳವಡಿಸಿರುವ ತೋಟಗಳ ಪರಿಶೀಲನೆ ನಡೆಸುವಂತೆ ತಿಳಿಸಿದ ಈಶ್ವರ ಖಂಡ್ರೆ, ಹೊರಗುತ್ತಿಗೆ ಸಿಬ್ಬಂದಿಗೆ ಅಗತ್ಯ ಉಪಕರಣ, ನಿಯಮಿತವಾಗಿ ವೇತನ, ಭತ್ಯೆ ಪಾವತಿಸಲು ಸೂಚಿಸಿದರು.

ಕಳಸದಲ್ಲಿ ಕಾಡು ಕೋಣದ ದಾಳಿಗೆ ಕೂಲಿ ಕಾರ್ಮಿಕ ಸಾವಿಗೀಡಾಗಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ ಸಚಿವರು, ಕಾಡುಕೋಣ ಸೆರೆ ತರಬೇತಿ ಪಡೆದಿರುವ ಸಿಬ್ಬಂದಿಗಳನ್ನು ಸಮಸ್ಯೆ ಇರುವ ಪ್ರದೇಶಕ್ಕೆ ನಿಯೋಜಿಸಿ ಜನರ ಅಮೂಲ್ಯ ಪ್ರಾಣ ಉಳಿಸುವಂತೆ ತಿಳಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಚಿವ ಖಂಡ್ರೆ ಸೂಚನೆ
Add as Preferred on Google Follow on Google News
Share. WhatsApp Facebook Twitter Telegram
Previous Articleಮಹಿಳಾ ಮೀಸಲಾತಿ ಮಸೂದೆಯನ್ನು ಡಿಲಿಮಿಟೇಷನ್ ಜೊತೆ ಸೇರಿಸಿ ತಂದಿದ್ದಾರೆ, ಅದಕ್ಕಾಗಿ ವಿರೋಧಿಸಿದ್ದೇವೆ: ಸಿಎಂ
Next Article ಬೇಸಿಗೆ ರಜೆ ಹಿನ್ನೆಲೆ ಮೈಸೂರು, ಬೆಂಗಳೂರಿಂದ ವಿಶೇಷ ರೈಲು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.