BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

, ,

ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು

Author Picture
Published On: April 10, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು ಎಂದು ಕುಟುಕಿದ್ದಾರೆ.

ಇಂದು ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು, ಚಾಮುಂಡಿ ತಾಯಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು. ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ರಾಜಕೀಯವೇ ಸಾಕು ಎಂದು ಕಣ್ಣೀರಿಟ್ಟದ ಸಿದ್ದರಾಮಯ್ಯ ಅವರಿಗೆ ನಮ್ಮ ತಂದೆ, ದೇವೇಗೌಡರು ಸಮಾಧಾನಪಡಿಸಿದ್ದರು ಎಂದು ಹಿಂದಿನ ಘಟನೆಯನ್ನು ಕುಮಾರಸ್ವಾಮಿ ಹಂಚಿಕೊಂಡರು.

ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ ಸೇರಿ ಬಹುತೇಕರು ಸೋತಿದ್ದೆವು. ಆಗ ನನಗೆ ರಾಜಕೀಯ ಬೇಡ ಅಂತ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದರು. 2004ರಲ್ಲಿ ಮಂಡ್ಯ, ರಾಮನಗರದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದಿಲ್ಲ. ನಾವು ಕೂಡ ಸಿದ್ದರಾಮಯ್ಯರನವರನ್ನು ಕರೆಯಲಿಲ್ಲ. ಸಿದ್ದರಾಮಯ್ಯ ಅಹಿಂದ ಅಂತ ಸಮುದಾಯಗಳ ಸಂಘಟನೆ ಮಾಡಿದ್ರು. ದೇವೇಗೌಡರಿಗೆ ಅನ್ಯಾಯ ಮಾಡಿದರು, ಬೆನ್ನಿಗೆ ಚೂರಿ ಹಾಕಿದರು. 2006ರಲ್ಲಿ ಕೇವಲ 200 ವೋಟ್​​​​​ಗಳಲ್ಲಿ ಗೆದ್ದಾಗ ಹೇಗಿತ್ತು ನೆನಪಿಸಿಕೊಳ್ಳಿ? ಎಂದು ವಾಗ್ದಾಳಿ ನಡೆಸಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಯಾಕೆ ಸೋತರು? ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯನವರಿಗಿಲ್ಲ. ಸಿದ್ದರಾಮಯ್ಯ ಅಹಿಂದ ಚಾಂಪಿಯನ್ ಅಂತ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷ ಬಿಟ್ಟು ಬಂದು 5 ಸ್ಥಾನ ಗೆಲ್ಲಲಿ ಎಂದು ಸವಾಲು ಹಾಕಿದರು.

ಹಣ ವಸೂಲಿಗಾಗಿ ಮಗನ ನೇಮಕ

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಮಗನ ವಸೂಲಿ ಹೇಗಿದೆ ಎಂಬುದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ. ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆಯ ಇಲ್ಲ. ನಾನು ನನ್ನ ಮಗನನ್ನು ವಸೂಲಿಗಾಗಿ ರಾಜಕೀಯಕ್ಕೆ ತಂದಿಲ್ಲ. ಜನರ ಅಪೇಕ್ಷೆಯಂತೆ ನಿಖಿಲ್ ರಾಜಕೀಯಕ್ಕೆ ಬಂದಿದ್ದಾನೆ ಎಂದು ಸಿಎಂಗೆ ಟಾಂಗ್ ಕೊಟ್ಟರು

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp