• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿಧಾನಸಭೆಯಲ್ಲಿ ಪೆನ್​ಡ್ರೈವ್​ ಹಿಡಿದು ಗುಡುಗಿದ ಆರ್ ಅಶೋಕ್

Sambrama Prabha News by Sambrama Prabha News
February 3, 2026
in Politics
0
ವಿಧಾನಸಭೆಯಲ್ಲಿ ಪೆನ್​ಡ್ರೈವ್​ ಹಿಡಿದು ಗುಡುಗಿದ ಆರ್ ಅಶೋಕ್

Updated By: Priyalachhi

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಅಬಕಾರಿ ಇಲಾಖೆಯಲ್ಲಿ, ಪರವಾನಗಿ ನೀಡಲು ಮತ್ತು ವರ್ಗಾವಣೆಯನ್ನು ಸುಗಮಗೊಳಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಆದ್ದರಿಂದ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ರಾಜ್ಯ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ಮುಂಚೂಣಿಯಲ್ಲಿದ್ದು, ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ. ಆ ಆಡಿಯೋ ದಾಖಲೆ ಈ ಪೆನ್‌ಡ್ರೈವ್‌ನಲ್ಲಿದೆ ಎಂದು ಆರ್ ಅಶೋಕ್​, ಸದನಕ್ಕೆ ಪೆನ್​ಡ್ರೈವ್ ತೋರಿಸಿದರು.

Tags: ಆರ್ ಅಶೋಕ್
Previous Post

ಭ್ರಷ್ಟಾಚಾರ ಆರೋಪಕ್ಕೆ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡುವಂತೆ ವಿಪಕ್ಷಗಳು ಪಟ್ಟು

Next Post

ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM

Next Post
ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM

ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.