ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಚಿಕ್ಕಮಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಶುಕ್ರವಾರ ತೀರ್ಪು ನೀಡಿದೆ.

ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ಆರಂಭದಲ್ಲಿ ಸ್ಥಳೀಯ ಪೊಲೀಸರು, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಹೇಳಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಹಾಗೂ ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಯೋಗೇಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version