Updated By: Priyalachhi

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯವಾಗಿ ಮಹತ್ವದ್ದಾಗಿದ್ದು, ಕೇಂದ್ರ- ರಾಜ್ಯ ಸಂಬಂಧದ ದೃಷ್ಟಿಯಿಂದ ಗಂಭೀರ ಪರಿಣಾಮಗಳ ಬಗ್ಗೆ ಯೋಚನೆ ಮಾಡುವಂತೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ವಿಶೇಷವಾಗಿ ಈ ಕಾಯ್ದೆಯಲ್ಲಿ ಅನುದಾನ ಹಂಚಿಕೆಯ ಹೊಸ ಮಾದರಿ ಹಾಗೂ ರಾಜ್ಯಗಳ ಮೇಲೆ ಬರುವ ಹೆಚ್ಚುವರಿ ಆರ್ಥಿಕ ಹೊರೆಯ ಕುರಿತು ಚಂದ್ರಬಾಬು ನಾಯ್ಡು ಅವರು ವ್ಯಕ್ತಪಡಿಸಿರುವ ಭೀತಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಈ ಆತಂಕಗಳು ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಅಸ್ತಿತ್ವಕ್ಕಾಗಿ ನೆಚ್ಚಿಕೊಂಡಿರುವ ಮೈತ್ರಿ ಪಕ್ಷದಿಂದಲೇ ಬಂದಿರುವುದು ವಿಶೇಷ ಎಂದಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ವಿಬಿ‌ ಜಿ‌ ರಾಮ್ ಜಿ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಪರಸ್ಪರ ಸಹಕಾರದ ಆಶಯಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಎಚ್ಚರಿಸುತ್ತಿವೆ. ಈ ಕಾಯ್ದೆಯು ಹಣಕಾಸಿನ ಹೊಣೆಗಾರಿಕೆಯನ್ನು‌ ರಾಜ್ಯಗಳ‌ ಹೆಗಲಿಗೆ ವರ್ಗಾಯಿಸುತ್ತದೆ ಎಂಬುದು ನಮ್ಮ ಆಕ್ಷೇಪ ಎಂದು ಬರೆದುಕೊಂಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version