• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿಬಿ-ಜಿ ರಾಮ್ ಜಿ ಟೀಕಿಸುವ ಜಾಹೀರಾತು ಖಂಡಿಸಿ ಬಿಜೆಪಿ ಸಭಾತ್ಯಾಗ

Sambrama Prabha News by Sambrama Prabha News
January 29, 2026
in Politics
0
ವಿಬಿ-ಜಿ ರಾಮ್ ಜಿ ಟೀಕಿಸುವ ಜಾಹೀರಾತು ಖಂಡಿಸಿ ಬಿಜೆಪಿ ಸಭಾತ್ಯಾಗ

Updated By: Priyalachhi

ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದನ್ನು ವಿರೋಧಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಸಭಾತ್ಯಾಗ ಮಾಡಿತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರಿಗೆದಾರರ ಹಣವನ್ನು “ಸುಳ್ಳು ಪ್ರಚಾರ”ಕ್ಕಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.

ಇಂದು ವಿಧಾನಸಭೆಯಲ್ಲಿ ಜಾಹೀರಾತು ವಿಷಯವನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, “ಎಲ್ಲಾ ಪತ್ರಿಕೆಗಳಲ್ಲಿ ಮುಖಪುಟ ಜಾಹೀರಾತು ಇದೆ. ಸರ್ಕಾರವು ತೆರಿಗೆದಾರರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ಹೇಳುವ ಎಲ್ಲವನ್ನೂ ರಾಜ್ಯ ಸರ್ಕಾರ “ಕೈಜೋಡಿಸಿ” ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಸೂಚಿಸುತ್ತಿರುವಂತೆ ಕಾಣುತ್ತಿದೆ. ಆದರೆ ಈ ಜಾಹೀರಾತು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡರು.

“ಯಾವ ಕಾನೂನನ್ನು ಉಲ್ಲಂಘಿಸಲಾಗಿದೆ ಎಂಬುದನ್ನು ಬಿಜೆಪಿ ಎತ್ತಿ ತೋರಿಸಲಿ” ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

Tags: ವಿಬಿ-ಜಿ ರಾಮ್ ಜಿ
Previous Post

ನಟ ದರ್ಶನ್: ಜೈಲಲ್ಲೂ ಅಭಿಮಾನಿಗಳ ಕಾಟ

Next Post

ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

Next Post
ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ:  ಸಿಎಂ ಸಿದ್ದರಾಮಯ್ಯ

ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.