BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

,

ವಿರೋಧ ಪಕ್ಷಗಳ ‘ಮಹಿಳಾ ವಿರೋಧಿ’ ಮನಸ್ಥಿತಿ ಬಯಲು ಮಾಡಿ: ಪ್ರಧಾನಿ ಮೋದಿ ಸೂಚನೆ

Author Picture
Published On: April 18, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಮಹಿಳಾ ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೆ ತರುವ ಮಸೂದೆಯನ್ನು ಬೆಂಬಲಿಸದ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಅಲ್ಲದೆ ಕೇಂದ್ರ ಸಚಿವರು ವಿರೋಧ ಪಕ್ಷಗಳ ‘ಮಹಿಳಾ ವಿರೋಧಿ’ ಮನಸ್ಥಿತಿಯನ್ನು ಜನರ ಮುಂದೆ ಬಹಿರಂಗಪಡಿಸಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ತಮ್ಮ ಸರ್ಕಾರದ ಬೆಂಬಲ ಮತ್ತು ಬದ್ಧತೆಯನ್ನು ಪ್ರಧಾನಿ ಮೋದಿ ಅವರು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪುನರುಚ್ಚರಿಸಿದರು.

ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಷಯವನ್ನು ತಳಮಟ್ಟಕ್ಕೆ ಅಂದರೆ ದೇಶದ ಪ್ರತಿ ಹಳ್ಳಿಗೂ ಕೊಂಡೊಯ್ಯುವಂತೆ ಮತ್ತು ವಿರೋಧ ಪಕ್ಷಗಳ ‘ಮಹಿಳಾ ವಿರೋಧಿ’ ಮನಸ್ಥಿತಿಯನ್ನು ಜನರ ಮುಂದೆ ಬಹಿರಂಗಪಡಿಸುವಂತೆ ಪ್ರಧಾನಿ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp